ಮಡಿಕೇರಿ: ಹುಲಿತಾಳದ ಸಮುದಾಯ ಭವನದಲ್ಲಿ ಜೈ ಭೀಮ್ ಕ್ರಿಕೆಟ್ ಕಪ್ ೨೦೨೨ ಇವರ ಆಶ್ರಯದಲ್ಲಿ ೧೩೧ನೇ ವರ್ಷದ ಅಂಬೇಡ್ಕರ್ ಜಯಂತೋತ್ಸವ ಆಚರಣೆ ಮಾಡಲಾಯಿತು.
ಕಾರ್ಯಕ್ರಮಕೆ ಸಮಾಜ ಸೇವಕ ಭಾರ್ಗವ ಚೆರಿಯಮನೆ, ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೇಶ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಪೂವಮ್ಮ, ನವೀನ್ ಹಾಗೂ ಗ್ರಾಮದ ಹಿರಿಯರು ಗ್ರಾಮಸ್ಥರು ಹಾಜರಿದ್ದರು.ಸುಂಟಿಕೊಪ್ಪ: ಸುಂಟಿಕೊಪ್ಪ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ೧೩೧ನೇ ಬಾಬಾ ಸಾಹೇಬ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಚರಿಸಲಾಯಿತು.
ಬಿಜೆಪಿ ಕಾರ್ಯಕರ್ತರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ನಂತರ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಗ್ರಾಮ ಪಂಚಾಯಿತಿ ಸದಸ್ಯ ಪಿ.ಆರ್. ಸುನಿಲ್ ಕುಮಾರ್ ವಿವರಿಸಿದರು.
ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಶಾಂತ್ ಹಾಗೂ ವಾಸುದೇವ್, ಮುಖಂಡರಾದ ಧನು ಕಾವೇರಪ್ಪ, ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ವೇಳೆ ಸುಂಟಿಕೊಪ್ಪದ ೭ ಬೂತ್ಗಳಲ್ಲೂ ಡಾ. ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು.ಪೊನ್ನಂಪೇಟೆ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ೧೩೧ನೇ ಜನ್ಮ ದಿನಾಚರಣೆ ನಡೆಯಿತು. ಈ ಸಂದರ್ಭ ಮುಖ್ಯ ಶಿಕ್ಷಕ ಬಿ.ಎಂ. ವಿಜಯ್, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಪೊನ್ನಂಪೇಟೆ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ೧೩೧ನೇ ಜನ್ಮ ದಿನಾಚರಣೆ ನಡೆಯಿತು. ಈ ಸಂದರ್ಭ ಮುಖ್ಯ ಶಿಕ್ಷಕ ಬಿ.ಎಂ. ವಿಜಯ್, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಕುಶಾಲನಗರ: ಪ್ರಸಕ್ತ ದೇಶದಲ್ಲಿ ಜಾತಿಗಳ ವೈಭವೀಕರಣ ವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸರಕಾರಿ ಕಾಲೇಜಿನ ಪ್ರಾಂಶುಪಾಲ ಡಾ. ದೇವರಾಜ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ವಾಸವಿ ಮಹಲ್ನಲ್ಲಿ ನಡೆದ ಅಂಬೇಡ್ಕರ್ ಅವರ ೧೩೧ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಇತಿಹಾಸವನ್ನು ಮುಚ್ಚಿಟ್ಟು ಸತ್ಯ ಮರೆಮಾಚಿ ಸಮಾಜದ ಬದಲಾವಣೆ ಸಾಧ್ಯವಿಲ್ಲ ಎಂದ ಅವರು ದಲಿತ ಶೋಷಿತ ವರ್ಗಗಳ ಬಗ್ಗೆ ಚಿಂತನೆ ಅಗತ್ಯ ಎಂದರು.
ಸಮಾಜದಲ್ಲಿ ಸಾವಿರಾರು ವರ್ಷಗಳಿಂದ ದೌರ್ಜನ್ಯಕ್ಕೆ ಒಳಗಾಗಿದ್ದ ಮಹಿಳೆಯರ ರೋದನ ಅರಿತು ಸಮಾನತೆಗೆ ಹೋರಾಟ ನಡೆಸಿದ ಡಾ. ಅಂಬೇಡ್ಕರ್ ಅವರ ಬರಹ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ಕೊಡಬೇಕಾಗಿದೆ, ಮಹಿಳೆಯರಿಗೆ ಸ್ವಾತಂತ್ರö್ಯ ಶಿಕ್ಷಣ ಮತ್ತಿತರ ಎಲ್ಲಾ ಹಕ್ಕುಗಳನ್ನು ಒದಗಿಸುವಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ ಎಂದರು.
ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ತಹಶೀಲ್ದಾರ್ ಪ್ರಕಾಶ್ ಅವರು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಕೆ.ಬಿ. ರಾಜು ಮತ್ತಿತರರು ಮಾತನಾಡಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಸುರಯ್ಯ ಬಾನು ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಎA. ಚರಣ್ ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್. ಅಶೋಕ್, ಉಪತಹಶೀಲ್ದಾರ್ ಶಿವಪ್ಪ ಮತ್ತಿತರರು ಇದ್ದರು.ಸೋಮವಾರಪೇಟೆ ಯುವ ಸೇನೆ: ಅಂಬೇಡ್ಕರ್ ಯುವ ಸೇನೆಯ ವತಿಯಿಂದ ಪಟ್ಟಣ ಸಮೀಪದ ಗಾಂಧಿನಗರದಲ್ಲಿ ಜನ್ಮದಿನವನ್ನು ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು. ಸೇನೆಯ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಪ್ರವೀಣ್, ಸಂಚಾಲಕ ಮನೋಜ್, ದೇವಾಲಯ ಸಮಿತಿ ಅಧ್ಯಕ್ಷ ರಾಮದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.