ಯಾವುದೇ ಅಮಾಯಕರನ್ನು ಬಂಧಿಸಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು, ಏ. ೧೯: ಹುಬ್ಬಳ್ಳಿ ಹಿಂಸಾಚಾರಕ್ಕೆ ಸಂಬAಧಿಸಿದAತೆ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಾಕ್ಷಾö್ಯಧಾರಗಳ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಹೇಳಿದ್ದಾರೆ. ಇಂದು ಶೃಂಗೇರಿ ದೇವಸ್ಥಾನದ ಮೆಣಸೆ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹುಬ್ಬಳ್ಳಿ ಹಿಂಸಾಚಾರಕ್ಕೆ ಸಂಬAಧಿಸಿದAತೆ ಯಾವುದೇ ಅಮಾಯಕರನ್ನು ಬಂಧಿಸಿಲ್ಲ. ಸಾಕ್ಷö್ಯಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು. ಹಿಂಸಾಚಾರದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಮತ್ತು ಸರ್ಕಾರ ಅವರಿಗೆ ಶಿಕ್ಷೆಯಾಗುವಂತೆ ಮಾಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು. ಕಾನೂನನ್ನು ಕೈಗೆತ್ತಿಕೊಂಡವರು ಕ್ರಮ ಎದುರಿಸಬೇಕಾಗುತ್ತದೆ. ಪೊಲೀಸ್ ಠಾಣೆ ಮೇಲೆ ದಾಳಿ ನಡೆಸುವುದು ಅಕ್ಷಮ್ಯ ಅಪರಾಧ ಎಂದರು. ‘ರಾಮರಾಜ್ಯ’ದ ಬದಲು ‘ರಾವಣ ರಾಜ್ಯವಾಗಿದೆ’ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ವಿರೋಧ ಪಕ್ಷಗಳು ಏನು ಹೇಳುತ್ತಿವೆ ಎಂಬುದು ನಮಗೆ ಮುಖ್ಯವಲ್ಲ. ಸಾಮಾನ್ಯ ಜನ ಏನು ಹೇಳುತ್ತಾರೆ ಅದು ಮುಖ್ಯ. ಪ್ರತಿಪಕ್ಷಗಳಿಂದ ನಾವು ಇದಕ್ಕಿಂತ ಉತ್ತಮವಾದದ್ದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಟೀಕಿಸಿದರು.

ಕ್ರಿಮಿನಲ್ ಪ್ರೊಸೀಜರ್ ಮಸೂದೆಗೆ ರಾಷ್ಟçಪತಿ ಅಂಕಿತ

ನವದೆಹಲಿ, ಏ. ೧೯: ಅಪರಾಧಿಗಳ ಮತ್ತು ಆರೋಪಿಗಳ ದೈಹಿಕ ಹಾಗೂ ಜೈವಿಕ ಮಾದರಿಗಳನ್ನು ಪಡೆಯಲು ಪೊಲೀಸರಿಗೆ ಅಧಿಕಾರ ನೀಡುವ ಕ್ರಿಮಿನಲ್ ಪ್ರೊಸೀಜರ್ (ಗುರುತು) ಮಸೂದೆಗೆ ರಾಷ್ಟçಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ. ಕೇಂದ್ರ ಸರ್ಕಾರ ಈ ಕ್ರಿಮಿನಲ್ ಪ್ರೊಸೀಜರ್ ಐಡೆಂಟಿಫಿಕೇಷನ್ ಬಿಲ್-೨೦೨೨ ಅನ್ನು ತಾ. ೪ ರಂದು ಲೋಕಸಭೆಯಲ್ಲಿ ಮತ್ತು ತಾ. ೬ ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಿತ್ತು. ಅದಕ್ಕೆ ರಾಷ್ಟçಪತಿಗಳು ತಾ. ೧೮ ರಂದು ಅಂಕಿತ ಹಾಕಿದ್ದು, ಮಸೂದೆ ಈಗ ಕಾನೂನು ರೂಪ ಪಡೆದುಕೊಂಡಿದೆ. ಈ ಹೊಸ ಕಾನೂನಿಂದ ಬಂಧಿತ ವ್ಯಕ್ತಿಗೆ ಸಂಬAಧಿಸಿದ ಎಲ್ಲಾ ರೀತಿಯ ಮಾಹಿತಿಯನ್ನು ಅಂದರೆ ರೆಟಿನಾ, ಪಾದದ ಗುರುತುಗಳು ಮತ್ತು ಬ್ರೆöÊನ್ ಮ್ಯಾಪಿಂಗ್‌ನಿAದ ಮಾಹಿತಿ ಸಂಗ್ರಹಿಸುವ ಅಧಿಕಾರ ಪೊಲೀಸರಿಗೆ ದೊರೆಯಲಿದೆ. ಇದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಬಂಧನಕ್ಕೊಳಗಾದ ಯಾವುದೇ ವ್ಯಕ್ತಿಯ ವೈಯಕ್ತಿಕ ಜೈವಿಕ ದತ್ತಾಂಶವನ್ನು ಸಂಗ್ರಹಿಸಲು ಈ ಮಸೂದೆ ಅನುಮತಿ ನೀಡಿದೆ. ಇದರಲ್ಲಿ ಬೆರಳಚ್ಚು, ರೆಟಿನಾ ಸ್ಕಾö್ಯನ್, ಭೌತಿಕ ಹಾಗೂ ಜೈವಿಕ ಮಾದರಿಗಳು ಮತ್ತು ಅವುಗಳ ವಿಶ್ಲೇಷಣೆ, ಸಹಿ, ಕೈಬರಹ ಅಥವಾ ಇತರ ರೀತಿಯ ಡೇಟಾವನ್ನು ಸಂಗ್ರಹಿಸಲು ಪೊಲೀಸರಿಗೆ ಅವಕಾಶ ನೀಡಲಾಗುತ್ತಿದೆ. ಖೈದಿಗಳ ಗುರುತಿಸುವಿಕೆ ಕಾಯಿದೆ-೧೯೨೦ರ ಬದಲಾಗಿ ಕ್ರಿಮಿನಲ್ ಪ್ರೊಸೀಜರ್ (ಗುರುತು) ಕಾಯ್ದೆ ಜಾರಿಗೆ ತರಲಾಗಿದೆ. ಹಳೆ ಕಾಯ್ದೆಯಾಗಿ ಕೇವಲ ಶಿಕ್ಷೆಗೊಳಗಾದ ಅಥವಾ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ಬಗ್ಗೆ ಸೀಮಿತ ಮಾಹಿತಿಯನ್ನು ಮಾತ್ರ ಸಂಗ್ರಹಿಸುವ ಅವಕಾಶ ಇತ್ತು. ಅಂದರೆ ಕೇವಲ ಬೆರಳಚ್ಚು ಮತ್ತು ಹೆಜ್ಜೆ ಗುರುತುಗಳನ್ನು ಮಾತ್ರ ತೆಗೆದುಕೊಳ್ಳಲಾಗುತ್ತಿತ್ತು.

ನಟ ದಿಲೀಪ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ನಕಾರ

ತಿರುವನಂತಪುರA, ಏ. ೧೯: ೨೦೧೭ರಲ್ಲಿ ನಟಿ ಮೇಲಿನ ಹಲ್ಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು ಕೊಲೆಗೆ ನಟ ದಿಲೀಪ್ ಮತ್ತು ಇತರರು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿ ಜಿಯಾದ್ ರಹಮಾನ್ ಎಎ ನೇತೃತ್ವದ ಪೀಠ ಮಂಗಳವಾರ ಮಧ್ಯಾಹ್ನ ಈ ತೀರ್ಪು ನೀಡಿದೆ. ದಿಲೀಪ್ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಅಥವಾ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಇಂತಹ ಎಫ್‌ಐಆರ್ ದಾಖಲು ಮಾಡಲಾಗಿದೆ. ತನ್ನ ಕುಟುಂಬದ ಕೆಲವು ಸದಸ್ಯರೇ ಸೇರಿ ಇಂತಹ ಎಫ್‌ಐಆರ್ ದಾಖಲು ಮಾಡಿಸಿದ್ದಾರೆ, ಇದನ್ನು ರದ್ದುಗೊಳಿಸಬೇಕು ಎಂದು ನಟ ದಿಲೀಪ್ ಹೈಕೋರ್ಟ್ಗೆ ಮನವಿ ಮಾಡಿದ್ದರು. ನಟಿ ಮೇಲಿನ ಹಲ್ಲೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರನ್ನು ಹತ್ಯೆ ಮಾಡಲು ನಟ ದಿಲೀಪ್ ಸಂಚು ರೂಪಿಸಿದ್ದಾರೆ ಎಂದು ಕೇರಳ ಕ್ರೆöÊಂ ಬ್ರಾಂಚ್ ಪೊಲೀಸರು ದಿಲೀಪ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದರು. ಈ ಎಫ್‌ಐಆರ್ ರದ್ದುಗೊಳಿಸುವಂತೆ ದಿಲೀಪ್ ಹೈಕೋರ್ಟ್ ಮೊರೆ ಹೋಗಿದ್ದರು.

ರಿಚಾರ್ಜ್ ಮಾಡಿಲ್ಲ ಎಂದು ನೇಣಿಗೆ ಶರಣಾದ ಬಾಲಕ!

ಜಬಲ್‌ಪುರ, ಏ. ೧೯: ತಂದೆ ತನ್ನ ಮೊಬೈಲ್ ಫೋನ್ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಲ್ಲ ಎಂಬ ಕಾರಣಕ್ಕೆ ೧೪ ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಧ್ಯ ಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಕೂಲಿ ಕೆಲಸ ಮಾಡುವ ಮತ್ತು ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಆತನ ತಂದೆ ಮಗನ ಮೊಬೈಲ್ ಫೋನ್ ಡೇಟಾ ಪ್ಯಾಕ್ ಅನ್ನು ರೀಚಾರ್ಜ್ ಮಾಡಲು ಸಾಧ್ಯವಾಗದ ಕಾರಣ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿರುವುದಾಗಿ ನಗರ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಶರ್ಮಾ ಅವರು ಹೇಳಿದ್ದಾರೆ. ಈ ಬಾಲಕ ಮೊಬೈಲ್ ಫೋನ್‌ನಲ್ಲಿ ಗೇಮ್ ಆಡುವ ವ್ಯಸನಿಯಾಗಿರುವುದು ಕಂಡುಬAದಿದೆ ಎಂದು ಸಿಎಸ್‌ಪಿ ತಿಳಿಸಿದ್ದಾರೆ.