ಮಡಿಕೇರಿ, ಏ. ೧೮: ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದೆೆÉ.

ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದ ಮೇಲೆ ಕಣ್ಣಿಟ್ಟಿದೆ.

ಆದರೆ ಜಾತ್ಯತೀತ ಜನತಾದಳ ತಮಗೆ ಹೆಚ್ಚಿನ ಬೆಂಬಲಿಗರು ಹಾಗೂ ಕಾರ್ಯಕರ್ತರು ಇರುವ ಮಡಿಕೇರಿ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ತೋರಿದೆ. ಜಾತ್ಯತೀತ ಜನತಾದಳ ವಿರಾಜಪೇಟೆ ಕ್ಷೇತ್ರಕ್ಕೆ ಹೋಲಿಸಿದರೆ ಮಡಿಕೇರಿ ಕ್ಷೇತ್ರದಲ್ಲಿ ಬಲಿಷ್ಠವಾಗಿದೆ.

ಕೆ.ಎಂ.ಗಣೇಶ್‌ರವರು ಜೆಡಿಎಸ್ ಜಿಲ್ಲಾಧ್ಯಕ್ಷರಾದ ದಿನಗಳಿಂದ ಜೆಡಿಎಸ್ ಪಕ್ಷದ ಸಂಘಟನೆಯನ್ನು ಹಲವು ಕಾರ್ಯಕ್ರಮಗಳ ಮೂಲಕ ಮಾಡಿಕೊಂಡು ಬರುತ್ತಿದ್ದಾರೆ.

ಅಧಿಕೃತವಾಗಿ ತೆನೆಹೊತ್ತ ನಾಪಂಡ ಮುತ್ತಪ್ಪ:

ಕಾಂಗ್ರೆಸ್ ತೊರೆದು ಜೆಡಿಎಸ್ ಸಭೆಯಲ್ಲಿ ಗುರುತಿಸಿಕೊಂಡಿದ್ದ ನಾಪಂಡ ಮುತ್ತಪ್ಪನವರು ಅಧಿಕೃತವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಮುತ್ತಪ್ಪನವರು ಜೆಡಿಎಸ್ ಸೇರ್ಪಡೆಯಾಗಿರುವುದರಿಂದ ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದAತಾಗಿದೆ.

ಮಡಿಕೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿರುವ ಸಂದರ್ಭದಲ್ಲಿ ನಾಪಂಡ ಮುತ್ತಪ್ಪನವರು ತಮ್ಮದೇ ಯುವಕರ ಪಡೆಯನ್ನು ಕಟ್ಟಿಕೊಂಡಿದ್ದರು.

ನಾಪಂಡ ಮುತ್ತಪ್ಪನರೊಂದಿಗೆ ಅವರ ಸಹೋದರ ನಾಪಂಡ ಮುದ್ದಪ್ಪ ಅವರು ಕೂಡ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ನಾಪಂಡ ಮುತ್ತಪ್ಪ, ಕೆ.ಎಂ ಗಣೇಶ್!

ಮಡಿಕೇರಿ ಕ್ಷೇತ್ರದಿಂದ ೨೦೧೩ ಹಾಗೂ ೨೦೧೮ ರಲ್ಲಿ ಎರಡು ಬಾರಿ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಮಾಜಿ ಸಚಿವ ಬಿ.ಎ ಜೀವಿಜಯ ಅವರು ಈಗ ಕೈ ಪಾಳಯದಲ್ಲಿದ್ದಾರೆ.

ಜೀವಿಜಯ ಅವರಿಗೆ ಮಡಿಕೇರಿ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳು ಹಾಗೂ ತಮ್ಮ ವೈಯಕ್ತಿಕ ಮತಗಳು ಇದ್ದವು. ಇದರಿಂದ ಜೆಡಿಎಸ್ ಪಕ್ಷ ಕಾಂಗ್ರೆಸ್ ಪಕ್ಷಕ್ಕಿಂತ ಹೆಚ್ಚಿನ ಮತಗಳು ಪಡೆಯುತ್ತಿತ್ತು.

ಆದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲು ಸದ್ಯಕ್ಕೆ ಅಸಾಧ್ಯವಾಗಿದೆ.

ಟಿಕೆಟ್ ನೀಡಬೇಕು ಎಂಬ ಷರತ್ತಿನೊಂದಿಗೆ ನಾಪಂಡ ಮುತ್ತಪ್ಪನವರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆಯಾದರೂ ಸಹಾ, ಅವರಿಗೆ ಟಿಕೆಟ್ ಖಚಿತವಾಗಿಲ್ಲ.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್ ರವರು ಕೂಡ ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದಾರೆ.

ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ! ಮಡಿಕೇರಿ ಕ್ಷೇತ್ರದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ತಯಾರಿ!

ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಜೂನ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ.

ಮಡಿಕೇರಿ ಕ್ಷೇತ್ರದಲ್ಲಿ ಬಲಿಷ್ಠವಾಗಿರುವ ಜೆಡಿಎಸ್ ಪಕ್ಷ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲುವುದರ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜುಗೊಳ್ಳಲು ಸಿದ್ಧರಾಗುತ್ತಿದ್ದಾರೆ.

ಈಗಾಗಲೇ ಜೆಡಿಎಸ್ ಪಕ್ಷದ ಜನತಾ ಜಲಧಾರೆ ಕಾರ್ಯಕ್ರಮ ಜಿಲ್ಲೆಯಲ್ಲಿ ನಡೆದಿದೆ. ಸದ್ಯದಲ್ಲೇ ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ.

ತೆನೆ ಹೊತ್ತ ಮಹಿಳೆಯ ಕೈ ಹಿಡಿಯುತ್ತಾ ಅಲ್ಪಸಂಖ್ಯಾತ ಮತಗಳು!!

ಜಿಲ್ಲೆಯಲ್ಲಿ ಎಲ್ಲಾ ಚುನಾವಣೆಯಲ್ಲೂ ಅಲ್ಪಸಂಖ್ಯಾತ ಮುಸ್ಲಿಂ ಮತಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದೆ. ಆದರೆ ಈ ಬಾರಿಯ ಪರಿಸ್ಥಿತಿ ಭಿನ್ನವಾಗಿದೆ.

ಮುಸ್ಲಿಮರ ಮೇಲೆ ನಡೆಯುತ್ತಿರುವ ಕೆಲವೊಂದು ಘಟನೆಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮೌನವಹಿಸಿರುವುದರ ಬಗ್ಗೆ ಸ್ವತಃ ಕಾಂಗ್ರೆಸ್ ಅಲ್ಪಸಂಖ್ಯಾತ ಜನಪ್ರತಿನಿಧಿಗಳು ಜಿಲ್ಲಾ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಅಲ್ಲದೇ ಕಾಂಗ್ರೆಸ್ ಬೆಂಬಲಿತ ಅಲ್ಪಸಂಖ್ಯಾತ ಜನಪ್ರತಿನಿಧಿಗಳು ಪ್ರತ್ಯೇಕವಾಗಿ ಸಭೆ ಕೂಡ ಸೇರಿದ್ದರು. ಈ ಎಲ್ಲಾ ಪ್ರಯೋಜನವನ್ನು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಡೆಯುವ ಸಾಧ್ಯತೆಯಿದೆ.

ಮಡಿಕೇರಿ ಕ್ಷೇತ್ರದಲ್ಲಿ ಇದೀಗ ೩೪ ಸಾವಿರಕ್ಕೂ ಅಧಿಕ ಮುಸ್ಲಿಂ ಮತದಾರರಿದ್ದಾರೆ. ಇದರಲ್ಲಿ ಯಾವ ಪಕ್ಷದ ಪಾಲು ಎಷ್ಟು ಎಂಬುದರ ಮೇಲೆ ಫಲಿತಾಂಶ ನಿಂತಿದೆ.

ಅಲ್ಲದೇ ವಿಧಾನಪರಿಷತ್ ಸದಸ್ಯರಾಗಿದ್ದ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಸಿ.ಎಂ ಇಬ್ರಾಹಿಂ ಅವರು ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಸಿ.ಎA ಇಬ್ರಾಹಿಂ ಅವರು ಕಳೆದ ಹಲವಾರು ವರ್ಷಗಳಿಂದ ಕೊಡಗು ಜಿಲ್ಲೆಯ ಮುಸ್ಲಿಂ ನಾಯಕರೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕ. ಇದರಿಂದ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಕೊಂಚ ಮಟ್ಟಿಗೆ ಲಾಭ ಆಗಬಹುದು.

ಮಡಿಕೇರಿ ಕ್ಷೇತ್ರದ ಮೇಲೆ ಕಣ್ಟಿಟ್ಟಿರುವ ತೆನೆ ಹೊತ್ತ ಮಹಿಳೆ ಕೊಡಗು ಜಿಲ್ಲೆಯಲ್ಲಿ ಚುನಾವಣೆ ಸಂದರ್ಭ ತ್ರಿಕೋನ ಸ್ಪರ್ಧೆ ಒಡ್ಡಲಿದ್ದಾಳಾ ಎಂದು ಕಾದು ನೋಡೋಣ.

-ಕೆ.ಎಂ. ಇಸ್ಮಾಯಿಲ್ ಕಂಡಕೆರೆ.