ಮಡಿಕೇರಿ, ಏ. ೧೯: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿ ದೇವಾಲಯದ ೧೫ನೇ ವರ್ಷದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.
ತಾ. ೧೮ ರಿಂದ ಕೇರಳದ ಪಯ್ಯನೂರ್ ಶ್ರೀ ಈಶ್ವರಿ ನಂಬೂದರಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ತಾ. ೧೯ ರಂದು ಮಹಾಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾಪೂಜೆ, ಅನ್ನದಾನ ನಡೆಯಿತು.