ಕೂಡಿಗೆ, ಏ. ೧೯: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಿಕೆಕಟ್ಟೆಯಲ್ಲಿ ಕರೆ ಒತ್ತುವರಿಯನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಕಂದಾಯ ಇಲಾಖೆ ವತಿಯಿಂದ ಸರ್ವೆ ನಡೆಸಿ ತೆರವುಗೊಳಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಸದಸ್ಯರಾದ ಶಿವಕುಮಾರ್, ಅಭಿವೃದ್ಧಿ ಅಧಿಕಾರಿ ವೀಣಾ, ಭೂಮಾಪನ ಇಲಾಖೆಯ ವೆಂಕಟೇಶ ತೊರೆನೂರು ಗ್ರಾಮ ಲೆಕ್ಕಾಧಿಕಾರಿ ಪೀರ್ ಮಹಮ್ಮದ್ ಗ್ರಾಮ ಪ್ರಮುಖರಾದ ರಾಜು ದೇವರಾಜ, ಪ್ರಕಾಶ್ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.