ವೀರಾಜಪೇಟೆ, ಏ. ೧೯: ಸಮೀಪದ ಬೇಟೋಳಿ ಗ್ರಾಮದ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ತಾ. ೨೧ರಂದು ನಡೆಯಲಿದೆ. ಬೆಳಿಗ್ಗೆ ಶ್ರೀ ಗಣಪತಿ ಹವನ, ಚಂಡಿಕಾ ಹವನ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ನಡೆಸಲಾಗುವದು. ಮಧ್ಯಾಹ್ನ ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆಯು ನಡೆಯಲಿದೆ. ಅಪರಾಹ್ನ ೩ ಗÀಂಟೆಗೆ ವಾರ್ಷಿಕ ಮಹಾಸಭೆ ಅಧ್ಯಕ್ಷ ಬಿ. ಬಿ. ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.