ವೀರಾಜಪೇಟೆ, ಏ. ೧೯: ಬೆಂಗಳೂರಿನಲ್ಲಿ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಸ್ವಾನ್ ಸಾಮಾಜಿಕ ಆರ್ಥಿಕ ಅಭಿವೃದ್ಧಿ ಸಂಸ್ಥೆ ಹಾಗೂ ಹೆಗಡೆ ಕಲ್ಚರಲ್ ಮತ್ತು ಸೋಶಿಯಲ್ ಅಕಾಡೆಮಿ ವತಿಯಿಂದ ನಡೆದ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭರತನಾಟ್ಯ ಕಲಾವಿದೆ ಕೆ. ಈಶಾನ್ವಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟಿçÃಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈಶಾನ್ವಿ ವೀರಾಜಪೇಟೆಯ ಆರ್ಜಿ ಗ್ರಾಮದ ಕಿರಣ್ ಮತ್ತು ರಜಿತ ದಂಪತಿಯ ಪುತ್ರಿಯಾಗಿದ್ದು, ಅರಮೇರಿ ಎಸ್ಎಂಎಸ್ ಶಾಲೆಯ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ನಾಟ್ಯ ಮಯೂರಿ ನೃತ್ಯ ಶಾಲೆಯ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರ ಶಿಷ್ಯೆ.