ಕರಿಕೆ, ಏ. ೨೦: ಬಂಡಿಪುರ ರಾಷ್ಟಿçÃಯ ಉದ್ಯಾನವನದಲ್ಲಿ ಕಾಡಾನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದೆ. ಇದು ಬಂಡಿಪುರ ಹಾಗೂ ಕರ್ನಾಟಕದಲ್ಲಿ ಪ್ರಥಮ ಘಟನೆಯಾಗಿದ್ದು, ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ಕುತೂಹಲಕ್ಕೆ ಕಾರಣವಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡಲು ಅನುಮೋದನೆ

ಶಿವಮೊಗ್ಗ, ಏ. ೨೦: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಚಿವ ಸಂಪುಟದ ತೀರ್ಮಾನವನ್ನು ಅನುಮತಿಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ಸಂಜೆ ವಿಮಾನ ನಿಲ್ದಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ವಿಮಾನ ನಿಲ್ದಾಣ ಆರಂಭಕ್ಕೂ ಮುನ್ನಾ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಲಿದೆ ಎಂದರು. ಶಿವಮೊಗ್ಗ ವಿಮಾನ ನಿಲ್ದಾಣ ಇದೀಗ ಉಡಾನ್ ಯೋಜನೆಯಡಿ ಬರಲಿದ್ದು, ಮುಂದೆ ಹೆಜ್ಜೆಯಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಅನುಮತಿ ಪಡೆಯಲಾಗುವುದು, ಇದು ಮುಗಿಯುತ್ತಿದ್ದಂತೆಯೇ, ರಾತ್ರಿ ಲ್ಯಾಂಡಿAಗ್ ಸೌಕರ್ಯವನ್ನು ಸಹ ಒದಗಿಸಲಾಗುವುದು ಎಂದರು. ಡಿಸೆಂಬರ್‌ನಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗುವುದರೊಳಗೆ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು ಮತ್ತು ಇದು ಅಂರ‍್ರಾಷ್ಟಿçÃಯ ಮಟ್ಟದ ವಿಮಾನ ನಿಲ್ದಾಣವಾಗಲಿದೆ ಎಂದು ಅವರು ತಿಳಿಸಿದರು.

ಹುಬ್ಬಳ್ಳಿ ಗಲಭೆ: ಅಭಿಷೇಕ್ ಹಿರೇಮಠ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ, ಏ. ೨೦: ವಾಟ್ಸ್ ಆ್ಯಪ್‌ನಲ್ಲಿ ವಿವಾದಾತ್ಮಕ ಸ್ಟೇಟಸ್ ಹಾಕಿ ಬಂಧಿತನಾಗಿರುವ ಹುಬ್ಬಳ್ಳಿಯ ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಬುಧವಾರ ವಜಾಗೊಳಿಸಿದೆ. ಆದರೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅಭಿಷೇಕ ಹಿರೇಮಠ ನನ್ನು ವಿವಾದಾತ್ಮಕ ಸ್ಟೇಟಸ್ ಹಾಕಿದ್ದ ಆರೋಪದಡಿ ಏಪ್ರಿಲ್ ೧೬ರಂದು ಪೊಲೀಸರು ಬಂಧಿಸಿದ್ದರು. ಈ ವಿದ್ಯಾರ್ಥಿಗೆ ತಾ. ೨೨ ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ ೪ನೇ ಅಧಿಕ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಆದರೆ, ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಕಾರಾಗೃಹದಲ್ಲೇ ಅಭ್ಯಾಸ ಮಾಡಲು ಪುಸ್ತಕ, ಮತ್ತಿತರ ವ್ಯವಸ್ಥೆ ಮಾಡಬೇಕು. ಸೂಕ್ತ ಬಂದೋಬಸ್ತ್ ಮೂಲಕ ಪರೀಕ್ಷೆಗೆ ಹಾಜರಾಗುವಂತೆ ಕಾರಾಗೃಹ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಪೊಲೀಸÀರಿಗೆ ಸೂಚಿಸಿದೆ ಎಂದು ಅಭಿಷೇಕ ಪರ ವಕೀಲ ಸಂಜು ಬಡಸ್ಕರ ತಿಳಿಸಿದ್ದಾರೆ. ಪ್ರಚೋದನಾಕಾರಿ ಪೋಸ್ಟ್ ಹಾಕಿ ಕೋಮುಗಲಭೆಗೆ ಕಾರಣವಾಗಿದ್ದ ಯುವಕ ಅಭಿಷೇಕ್ ಹಿರೇಮಠಗೆ ತಾ. ೩೦ ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹೊಟೇಲ್ ಓಪನ್ ಮಾಡಲು ಅನುಮತಿಗೆ ಪೊಲೀಸ್ ಆಯುಕ್ತರಿಗೆ ಪತ್ರ

ಬೆಂಗಳೂರು, ಏ. ೨೦: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದ ೨೪ ಗಂಟೆಯೂ ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳು ಓಪನ್ ಮಾಡಲು ಅನುಮತಿ ನೀಡುವಂತೆ ಬೃಹತ್ ಬೆಂಗಳೂರು ಹೊಟೇಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘದ ಸದಸ್ಯರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರವೇ ನಗರದ ಎಲ್ಲಾ ವಾಣಿಜ್ಯ ಘಟಕಗಳ ೨೪x೭ ಕಾರ್ಯನಿರ್ವಹಿಸಲು ಅನುಮತಿ ನೀಡಿದಾಗ, ಪೊಲೀಸ್ ಅಧಿಕಾರಿಗಳು ರಾತ್ರಿ ೧೧ ಗಂಟೆಯೊಳಗೆ ಮುಚ್ಚುವಂತೆ ಏಕೆ ಒತ್ತಾಯಿಸುತ್ತಾರೆ ಎಂದು ರೆಸ್ಟೋರೆಂಟ್ ಮಾಲೀಕ ವಿಜಯ್ ಅವರು ಪ್ರಶ್ನಿಸಿದ್ದಾರೆ. ಪತ್ರದಲ್ಲಿ, ಜನವರಿ ೨, ೨೦೨೧ ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ಉಲ್ಲೇಖಿಸಲಾಗಿದ್ದು, ಈ ಆದೇಶದ ಪ್ರಕಾರ, ೧೦ಕ್ಕಿಂತ ಹೆಚ್ಚು ಸಿಬ್ಬಂದಿ ಹೊಂದಿರುವ ರಾಜ್ಯದ ಎಲ್ಲಾ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ದಿನದ ೨೪ ಗಂಟೆ ತೆರೆದಿರಲು ಅನುಮತಿ ನೀಡಲಾಗಿದೆ. ಈ ಆದೇಶದ ಹೊರತಾಗಿಯೂ ಪೊಲೀಸರು ರಾತ್ರಿ ೧೧ ಅಥವಾ ೧೧.೩೦ಕ್ಕೆ ಹೊಟೇಲ್‌ಗಳನ್ನು ಬಂದ್ ಮಾಡುವಂತೆ ಸೂಚಿಸುತ್ತಾರೆ ಎಂದು ಬೃಹತ್ ಬೆಂಗಳೂರು ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ. ಪೊಲೀಸರು ಹೊಟೇಲ್‌ಗಳನ್ನು ಮುಚ್ಚುವಂತೆ ಒತ್ತಾಯಿಸಬಾರದು. ತಡರಾತ್ರಿಯಲ್ಲಿ ಕೆಲಸ ಮಾಡುವವರಿಗೆ, ಕಾಲ್‌ಸೆಂಟರ್ ಉದ್ಯೋಗಿಗಳಿಗೆ ಮತ್ತು ತಡರಾತ್ರಿ ನಗರಕ್ಕೆ ಪ್ರಯಾಣಿಸುವವರಿಗೆ ಆಹಾರ ಲಭ್ಯವಾಗುವಂತೆ ನೋಡಿಕೊಳ್ಳಲು ಹೊಟೇಲ್ ಓಪನ್ ಇರಬೇಕು. ಇದರಿಂದ ನಗರದಲ್ಲಿ ಅಪರಾಧ ಪ್ರಮಾಣವೂ ಕಡಿಮೆಯಾಗಿ ರಾತ್ರಿ ಜೀವನ ಸುಧಾರಿಸುತ್ತದೆ ಎಂದು ರಾವ್ ಹೇಳಿದ್ದಾರೆ.

ಮೌಖಿಕ ಆದೇಶದ ಮೇಲೆ ಕಾಮಗಾರಿ ಮಾಡುವಂತಿಲ್ಲ

ಶಿವಮೊಗ್ಗ, ಏ. ೨೦: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಾಗೂ ಟೆಂಡರ್ ಕಮಿಷನ್ ಬಗ್ಗೆ ಹಲವು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರೂ. ೫೦ ಕೋಟಿಗಿಂತ ಹೆಚ್ಚಿನ ಮೊತ್ತದ ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು, ಆರ್ಥಿಕ ತಜ್ಞರು ಮತ್ತು ಸಂಬAಧಪಟ್ಟ ಇಲಾಖೆಯ ತಾಂತ್ರಿಕ ತಜ್ಞರನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ತಿಳಿಸಿದ್ದಾರೆ. ಇಂದು ಶಿವಮೊಗ್ಗದ ಬಿ.ಜೆ.ಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿಎಂ, ಉನ್ನತ ಮಟ್ಟದ ಸಮಿತಿಯನ್ನು ಕೆಟಿಟಿಪಿ ಕಾಯ್ದೆಯನ್ವಯ ರಚಿಸಲಾಗಿದೆ. ಸಮಿತಿಯು ಕಾಮಗಾರಿಯ ಅಂದಾಜು ಮೊತ್ತ, ಕೆಟಿಟಿಪಿ ಕಾಯ್ದೆಯನ್ವಯ ಟೆಂಡರ್ ನಿಯಮಗಳು ಇವುಗಳನ್ನು ಪರಿಶೀಲಿಸಿದ ನಂತರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಬೇಕು. ಈ ಸಮಿತಿಯು ಕೆಲವೇ ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ. ಸರ್ಕಾರದ ಎಲ್ಲ ಇಲಾಖೆಗಳ ರೂ. ೫೦ ಕೋಟಿ ಮೀರಿದ ಟೆಂಡರ್‌ಗಳಿಗೂ ಈ ನಿಯಮ ಜಾರಿಯಾಗುತ್ತದೆ. ಟೆಂಡರ್‌ಗಳು ಹೆಚ್ಚಾದ ಸಂದರ್ಭದಲ್ಲಿ ಶೀಘ್ರ ಟೆಂಡರ್ ಪರಿಶೀಲನೆಗೆ ಅನುಕೂಲವಾಗುವಂತೆ ಪರ್ಯಾಯ ಸಮಿತಿಯೊಂದನ್ನೂ ರಚಿಸಲಾಗುವುದು ಎಂದರು. ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಕಾಮಗಾರಿಗಳು ಮೌಖಿಕ ಆದೇಶಗಳ ಮೇಲೆ ಕಾಮಗಾರಿ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೂ ಈ ರೀತಿ ನಡೆದರೆ ಸಂಬAಧಪಟ್ಟ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್, ಎಇಇ, ಶಾಖಾಧಿಕಾರಿಗಳು ಜವಾಬ್ದಾರರಾಗುತ್ತಾರೆ. ಗ್ರಾಮೀಣ ಪ್ರದೇಶದಲ್ಲಿ ಪಿಡಿಓ ಮತ್ತು ಇಓಗಳು ಜವಾಬ್ದಾರರಾಗುತ್ತಾರೆ ಎಂದು ಸ್ಪಷ್ಟವಾದ ಲಿಖಿತ ಸೂಚನೆ ನೀಡಲಾಗುವುದು ಎಂದರು.