ಸೋಮವಾರಪೇಟೆ, ಏ. ೨೦: ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಅಧ್ಯಕ್ಷೆ ಮಂಜುಳಾ ಸುಬ್ರಮಣಿ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು. ಮಂಡಲದಾದ್ಯAತ ಬಿಜೆಪಿ ಪಕ್ಷವನ್ನು ಸದೃಢಗೊಳಿಸುವುದು ಹಾಗೂ ಮಹಿಳೆಯರಲ್ಲಿ ಪಕ್ಷದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಚರ್ಚಿಸ ಲಾಯಿತು. ಅಂತೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆ ಯರಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಬಗ್ಗೆ ಮಹಿಳಾ ಮತದಾರರಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಲಾಯಿತು.

ಜಿಲ್ಲೆಯ ಪ್ರಥಮ ಮಹಿಳಾ ಆಟೋ ಚಾಲಕಿ ನೆಲ್ಲಿಹುದಿಕೇರಿಯ ಸುಜಾತಾ ಕುಮಾರ್ ಅವರನ್ನು ಮಹಿಳಾ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹೆಚ್.ಎನ್. ತಂಗಮ್ಮ, ವೇದಾವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭುವನೇಶ್ವರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.