ಮಡಿಕೇರಿ, ಏ.೨೦: ಸೋಮವಾರಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇದ್ದ ೩ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮತ್ತು ೬ ಅಂಗನವಾಡಿ ಕೇಂದ್ರದ ಸಹಾಯಕಿಯರ ಹುದ್ದೆಗೆ ಈಗಾಗಲೇ ಅರ್ಜಿ ಅಹ್ವಾನಿಸಲಾಗಿತ್ತು, ಅದರಂತೆ ತಾತ್ಕಾಲಿಕವಾಗಿ ಗುರುತಿಸಿ ಆಯ್ಕೆ ಮಾಡಲಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ತಾ. ೨೮ ರ ೫.೩೦ ರೊಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ತಿçÃಶಕ್ತಿ ಭವನ ಕಟ್ಟಡ, ತಾಲೂಕು ಪಂಚಾಯತ್ ಕಚೇರಿ ಆವರಣ, ಸೋಮವಾರಪೇಟೆ, ಇವರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವಂತೆ ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.