ಕುಶಾಲನಗರ, ಏ.೨೦: ಆರೋಗ್ಯವಂತ ಸಮಾಜ ನಿರ್ಮಾಣವಾದಲ್ಲಿ ಮಾತ್ರ ಯಾವುದೇ ದೇಶ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟಿçÃಯ ಆರೋಗ್ಯ ಅಭಿಯಾನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಇತರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ೭೫ನೇ ವರ್ಷದ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ಕುಶಾಲನಗರದಲ್ಲಿ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಆಹಾರ ಪದ್ಧತಿ ಬದಲಾದಂತೆ ರೋಗಗ್ರಸ್ತ ಸಮಾಜ ನಿರ್ಮಾಣವಾಗುವ ಮೂಲಕ ಜನರ ಶಕ್ತಿ ಚೈತನ್ಯ ಕುಸಿತವಾಗಿ ಎಲ್ಲಾ ಹಂತದ ಬೆಳವಣಿಗೆಗಳು ಕುಂಠಿತವಾಗಲು ಕಾರಣವಾಗುತ್ತದೆ ಎಂದರು.

ಪ್ರಧಾನಮAತ್ರಿ ಮೋದಿ ಅವರ ದೂರದೃಷ್ಟಿಯ ಚಿಂತನೆ ಮೂಲಕ ಕೊರೊನಾ ಮಾರಿ ತೊಲಗುವಲ್ಲಿ ಯಶಸ್ವಿಯಾಗಿದ್ದು ಪ್ರಸಕ್ತ ಮಾಸ್ಕ್ ರಹಿತ ರಾಷ್ಟç ನಿರ್ಮಾಣವಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಳೆದ ಎರಡು ಮೂರು ವರ್ಷಗಳಲ್ಲಿ ದೇಶದ ಎಲ್ಲೆಡೆ ವೈದ್ಯಲೋಕದ ಕೊಡುಗೆ ಅಪಾರವಾಗಿದ್ದು, ಇಡೀ ವಿಶ್ವವೇ ಭಾರತದತ್ತ ನೋಡುವಂತಾಗಿದೆ ಎಂದರು.

ಭಾರತೀಯ ಚಿಕಿತ್ಸಾ ಪದ್ಧತಿ ಇಡೀ ವಿಶ್ವದ ಎಲ್ಲೆಡೆ ಅಳವಡಿಕೆ ಆಗುತ್ತಿರುವುದು ಸಂತಸದ ಸಂಗತಿ ಎಂದ ಪ್ರತಾಪ್ ಸಿಂಹ ದೇಶದ ಕಟ್ಟಕಡೆಯ ಪ್ರಜೆಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ನಮ್ಮ ವೈದ್ಯಕೀಯ ರಂಗ ಸನ್ನದ್ಧವಾಗಿದೆ ಎಂದರು.

ಸ್ಪೆöÊಸಸ್ ಮಳಿಗೆ ಪರಿಶೀಲನೆ

ಕೊಡಗು ಜಿಲ್ಲೆಯ ಹೆದ್ದಾರಿ ಬದಿಯಲ್ಲಿ ನಾಯಿ ಕೊಡೆಗಳಂತೆ ತಲೆಯೆತ್ತಿರುವ ಶೆಡ್‌ಗಳಲ್ಲಿ ಚಾಕಲೇಟ್, ಜೇನುತುಪ್ಪ, ಹೋಂ ಮೇಡ್ ವೈನ್ ಮತ್ತಿತರ ಮಳಿಗೆಗಳ ಬಗ್ಗೆ ಅಧಿಕಾರಿಗಳು ಕೂಡಲೇ ಭೇಟಿ ನೀಡಿ ವಸ್ತುಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಪ್ರತಿಯೊಬ್ಬರೂ ಆರೋಗ್ಯಕರ ಜೀವನ ರೂಪಿಸಿಕೊಳ್ಳಬೇಕು. ಪ್ರಕೃತಿದತ್ತ ಆಹಾರ ಪದ್ಧತಿ ಅಗತ್ಯ ಎಂದ ರಂಜನ್ ರಾಸಾಯನಿಕ ಮಿಶ್ರಿತ ಆಹಾರ ಸೇವನೆ ಆರೋಗ್ಯದ ಮೇಲೆ ಭಾರಿ ಪ್ರಮಾಣದ ಹಾನಿ ಉಂಟು ಮಾಡುತ್ತದೆ. ಆರೋಗ್ಯ ಕೆಡದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಕಾಯಿಲೆ ತಡೆಗಟ್ಟುವ ಮೂಲಕ ಉತ್ತಮ ಆರೋಗ್ಯ ಕಾಪಾಡಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ. ಜಯವರ್ಧನ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಅಧ್ಯಕ್ಷರಾದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಆರ್. ವೆಂಕಟೇಶ್ ಜಿಲ್ಲಾ ವೈದ್ಯಾಧಿಕಾರಿ ಡಾ. ಗೋಪಿನಾಥ್, ತಾಲೂಕು ತಹಶೀಲ್ದಾರ್‌ಗಳಾದ ಆರ್. ಗೋವಿಂದರಾಜು, ಬಿ.ಎಂ. ಪ್ರಕಾಶ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ, ವೈದ್ಯರು ಗಳಾದ ಡಾ. ವಿಶಾಲ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ಮತ್ತಿತರರು ಇದ್ದರು.