ಮಡಿಕೇರಿ, ಏ.೨೦: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವು ತಾ. ೨೧ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿ ದ್ದಾರೆ. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಅಧ್ಯಕ್ಷತೆ ವಹಿಸಲಿ ದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕಿ ವೀಣಾ ಅಚ್ಚಯ್ಯ, ಎಸ್.ಎಲ್. ಬೋಜೇಗೌಡ, ಸುಜಾ ಕುಶಾಲಪ್ಪ, ಆಯನೂರು ಮಂಜುನಾಥ, ನಗರಸಭೆ ಅಧ್ಯಕೆÀ್ಷ ಅನಿತಾ ಪೂವಯ್ಯ, ಜಿ.ಪಂ. ಆಡಳಿ ತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ಇತರರು ಪಾಲ್ಗೊಳ್ಳಲಿದ್ದಾರೆ.