ಕಡಂಗ, ಏ. ೨೦: ಕಳೆದ ೧೦ ದಿನಗಳಿಂದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಸುತ್ತಮುತ್ತಲಿನ ಗ್ರಾಮದಲ್ಲಿ ನಿರಂತರ ವಿದ್ಯುತ್ ಕಡಿತಗೊಳ್ಳುತ್ತಿದ್ದು, ಗ್ರಾಮಸ್ಥರು ಹಲವು ಬಾರಿ ಇಲಾಖೆಯ ಅಧಿಕಾರಿಗಳ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಕರೆ ಮಾಡಿದ ಸಂದರ್ಭ ಅತಿಶೀಘ್ರದಲ್ಲಿ ವಿದ್ಯುತ್ ಸಂಪರ್ಕದ ಸಮಸ್ಯೆಯನ್ನು ನಿವಾರಿಸುವುದಾಗಿ ಹೇಳುತ್ತಾರೆ. ಆದರೆ ಸಮಸ್ಯೆ ಪರಿಹರಿಸುವಲ್ಲಿ ಮುಂದಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಿಗ್ಗೆ ಸ್ವಲ್ಪ ಹೊತ್ತು ವಿದ್ಯುತ್ ಸಂಪರ್ಕವಿದ್ದರೂ ಸಂಜೆ ೬ ಗಂಟೆಯಿAದ ನಿರಂತರವಾಗಿ ವಿದ್ಯುತ್ ಕಡಿತಗೊಂಡು ಕಾರ್ಗತ್ತಲು ಆವರಿಸಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದರಿAದ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಣೆಯಾಗದಿದ್ದಲ್ಲಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.