ಸುಂಟಿಕೊಪ್ಪ, ಏ. ೨೦: ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ ೪೪ ನೇ ವಾರ್ಷಿಕ ಮಹೋತ್ಸವಕ್ಕೆ ವಿವಿಧ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.

ತಾ. ೧೮ ರಂದು ಪೂರ್ವಾಹ್ನ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳು ಪ್ರಾರಂಭಗೊAಡವು. ದೀಪಾರಾಧನೆ ಏಳು ಸುತ್ತಿನ ಪ್ರದಕ್ಷಿಣೆ ಹಾಗೂ ಶ್ರೀ ಚಾಮುಂಡಿ ತಂಡದಿAದ ಚಂಡೆ ಮೇಳ ಜನರ ಮನಸೂರೆಗೊಂಡಿತು. ಮಂಗಳವಾರದAದು ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆಯೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಚಂಡೆ, ವಾಲಗ, ಕಳಶಹೊತ್ತ ಮಕ್ಕಳು ಮತ್ತು ಮಹಿಳೆಯರು ಮೆರವಣಿಗೆಯ ಮೂಲಕ ದೇವಾಲಯಕ್ಕೆ ಆಗಮಿಸಿದರು. ಮಂಗಳವಾರ ರಾತ್ರಿಯಿಂದ ವಿವಿಧ ದೈವಗಳ ಕೋಲ ನಡೆದು ಬುಧವಾರ ಪೂರ್ವಾಹ್ನ ಅಜ್ಜಪ್ಪ ಕೋಲ ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲದೊಂದಿಗೆ ರಾತ್ರಿ ೮ ಗಂಟೆಗೆ ಶ್ರೀದೇವಿ ನೈವೇದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ಪ್ರಕಟಣೆ ತಿಳಿಸಿದೆ.