ಕೂಡಿಗೆ, ಏ. ೨೦: ಶಿರಂಗಾಲ ಗ್ರಾಮದ ಹಾಸನ ಹೆದ್ದಾರಿಗೆ ಹೊಂದಿಕೊAಡಿರುವ ಗ್ರಾಮದ ಒಳಕ್ಕೆ ತೆರಳುವ ಮುಖ್ಯ ರಸ್ತೆಯ ರೂ. ೭೪ ಲಕ್ಷ ವೆಚ್ಚದ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.
ಪ್ರತಾಪ್ ಸಿಂಹ ಮಾತನಾಡಿ, ಸಣ್ಣ ನೀರಾವರಿ ಇಲಾಖೆಯ ಮೂಲಕ ಕೊಡಗು ಜಿಲ್ಲೆಗೆ ಮೂರು ಕೋಟಿ ಹಣ ಬಿಡುಗಡೆ ಆಗಿದ್ದು, ಅದರ ಮೂಲಕ ಕುಶಾಲನಗರ ತಾಲೂಕಿನ ಗೊಂದಿಬಸವನಹಳ್ಳಿ ಮತ್ತು ಶಿರಂಗಾಲ ಗ್ರಾಮದ ವ್ಯಾಪ್ತಿಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಅನುದಾನವನ್ನು ನೀಡಲಾಗಿದೆ ಎಂದರು.
ಎಂ.ಪಿ. ಅಪ್ಪಚ್ಚು ರಂಜನ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳ ರಸ್ತೆಯ ಅಭಿವೃದ್ಧಿಗೆ ರಾಜ್ಯ ಸರಕಾರ ಹೆಚ್ಚು ಅನುದಾನವನ್ನು ನೀಡಿದೆ. ಅಲ್ಲದೆ ಕಾವೇರಿ ನೀರಾವರಿ ನಿಗಮದ ಮೂಲಕ ೨೦ ಕೋಟಿಗೂ ಅಧಿಕ ವೆಚ್ಚದಲ್ಲಿ ಗ್ರಾಮಾಂತರ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಅಲ್ಲದೆ ನಾಲೆಗಳ ಅಭಿವೃದ್ಧಿ ಕಾರ್ಯವು ಪ್ರಗತಿಯಲ್ಲಿದೆ ಎಂದರು.
ಈ ಸಂದರ್ಭ ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಹೆಚ್.ಎಸ್. ಶ್ರೀನಿವಾಸ್, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗೀರತಿ, ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ತಾಲೂಕು ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜಯಣ್ಣ, ಶಿರಂಗಾಲ ಸಹಕಾರ ಸಂಘದ ಅಧ್ಯಕ್ಷ ಲೋಕೇಶ್, ಕುಶಾಲನಗರ ಎಪಿಸಿಎಂಎಸ್ ಉಪಾಧ್ಯಕ್ಷ ಜಗದೀಶ್, ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿ ಯಂತರ ಪುಟ್ಟಸ್ವಾಮಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್, ಸಹಾಯಕ ಅಭಿಯಂತರಾದ ಕಿರಣ್, ಸಿದ್ದರಾಜ್, ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿ ಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.