ಕುಶಾಲನಗರ, ಏ. ೨೦: ಕುಶಾಲನಗರದ ಯೂತ್ ಫ್ರೆಂಡ್ಸ್ ಆಶ್ರಯದಲ್ಲಿ ೪ನೇ ವರ್ಷದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಕುಶಾಲನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ಪಂದ್ಯಾಟ ನಡೆಯಲಿದೆ.
ಯೂತ್ ಫ್ರೆಂಡ್ಸ್ ಅಧ್ಯಕ್ಷ ಜಿ.ಆರ್.ಅಜಿತ್ ಕುಮಾರ್ ಅಧ್ಯಕ್ಷತೆಯಲ್ಲಿ ಪಂದ್ಯಾಟವನ್ನು ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಚಾಲನೆ ನೀಡಿದರು.
ಈ ಸಂದರ್ಭ ಕುಶಾಲನಗರ ಪಪಂ ಸದಸ್ಯರಾದ ಪ್ರಮೋದ್ ಮುತ್ತಪ್ಪ, ವಿ.ಎಸ್. ಆನಂದಕುಮಾರ್, ಶೇಖ್ ಖಲೀಮುಲ್ಲಾ, ಜಿ.ಪಂ. ಮಾಜಿ ಸದಸ್ಯ ವಿ.ಪಿ.ಶಶಿಧರ್, ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಅಪ್ಪಾಜಿ, ಯೂತ್ ಫ್ರೆಂಡ್ಸ್ ಪ್ರಮುಖ ಶಿವಶಂಕರ್ ಮತ್ತಿತರರು ಇದ್ದರು.