ಮಡಿಕೇರಿ, ಏ. ೨೧: ಅವಂದೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಶು ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು. ಕೊಡಗು ಅರೆಭಾಷೆ ಸಾಂಸ್ಕೃತಿಕ ಅಕಾಡೆಮಿಯ ಸಹಯೋಗದಲ್ಲಿ ಕಳಸ ಹೊತ್ತ ಮಹಿಳೆಯರಿಂದ ಮೆರವಣಿಗೆ ಮತ್ತು ಚಂಡೆ, ದುಡಿ ಕೊಟ್ಟು, ಚೌರಿಯಾಟ್ದೊಂದಿಗೆ ದೇವರ ಮಹಾಪೂಜೆ ಮಧ್ಯಾಹ್ನ ೧೨ ಗಂಟೆಗೆ ನಡೆಯಿತು. ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.