ಮಡಿಕೇರಿ, ಏ. ೨೧: ವಿದ್ಯುತ್ ಕಳ್ಳತನವು ವಿದ್ಯುಚ್ಛಕ್ತಿ ಕಾಯ್ದೆಯಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಅಪರಾಧವಾಗಿದೆ. ವಿದ್ಯುತ್ ಕಳ್ಳತನ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ವಿದ್ಯುತ್ ಕಳ್ಳತನದ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ದೂ.ಸಂ.೯೪೪೯೫೯೮೬೨೦ ಮತ್ತು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ದೂ.ಸಂ. ೯೪೪೮೪೯೯೯೦೨ನ್ನು ಸಂಪರ್ಕಿಸಿ, ಮಾಹಿತಿ ನೀಡುವಂತೆ ಕೋರಲಾಗಿದೆ. ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಸೆಸ್ಕ್ ಜಾಗೃತದಳ ಪ್ರಭಾರ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.