ಮಡಿಕೇರಿ, ಏ. ೨೧: ೨೦೨೧-೨೨ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ತಾ. ೨೨ ರಿಂದ (ಇಂದಿನಿAದ) ಮೇ ೧೮ರ ವರೆಗೆ ನಡೆಯಲಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಸಂಬAಧ ಜಿಲ್ಲಾಡಳಿತ ಹಾಗೂ ಪ.ಪೂ. ಶಿಕ್ಷಣ ಇಲಾಖೆ ವತಿಯಿಂದ ಸಕಲ ವ್ಯವಸ್ಥೆಗಳನ್ನು ಮಾಡಿ ಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಒಟ್ಟು ೬,೦೫೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಕಲಾ ವಿಭಾಗದಲ್ಲಿ ೧,೫೭೦, ವಾಣಿಜ್ಯ ವಿಭಾಗದಲ್ಲಿ ೩,೧೯೨, ವಿಜ್ಞಾನ ವಿಭಾಗದಲ್ಲಿ
(ಮೊದಲ ಪುಟದಿಂದ) ೧,೨೮೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ ೨,೯೧೯ ಬಾಲಕರು ಮತ್ತು ೩,೧೩೧ ಬಾಲಕಿಯರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದಾರೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ೬,೦೫೦ ವಿದ್ಯಾರ್ಥಿಗಳಲ್ಲಿ, ೫೪೨೩ ವಿದ್ಯಾರ್ಥಿಗಳು ಹೊಸದಾಗಿ, ೩೬೮ ಮಂದಿ ಪುನರಾವರ್ತಿತ ಹಾಗೂ ಖಾಸಗಿಯಾಗಿ ೨೫೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ ೧,೫೭೦, ವಾಣಿಜ್ಯ ವಿಭಾಗದಲ್ಲಿ ೩,೧೯೨, ವಿಜ್ಞಾನ ವಿಭಾಗದಲ್ಲಿ ೧,೨೮೮ ಮಂದಿ ಬರೆಯಲಿದ್ದಾರೆ.
ಪರೀಕ್ಷಾ ವೇಳೆಯಲ್ಲಿ ಅವ್ಯವಹಾರಗಳು ನಡೆಯದಂತೆ ಗಮನಿಸುವ ಸಲುವಾಗಿ ಜಿಲ್ಲಾಮಟ್ಟದಲ್ಲಿ ಒಂದು ಹಾಗೂ ಮಡಿಕೇರಿ ಹಾಗೂ ವೀರಾಜಪೇಟೆ ತಾಲೂಕುಗಳಲ್ಲಿ ತಲಾ ಒಂದು, ಸೋಮವಾರಪೇಟೆ ತಾಲೂಕಿನಲ್ಲಿ ೨ ತಂಡಗಳನ್ನು ರಚನೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು ೧೭ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಡಿಕೇರಿ ತಾಲೂಕಿನ ೫, ಕುಶಾಲನಗರ ತಾಲೂಕಿನ ೪, ಸೋಮವಾರಪೇಟೆ ತಾಲೂಕಿನ ೩, ವೀರಾಜಪೇಟೆ ತಾಲೂಕು ೨, ಪೊನ್ನಂಪೇಟೆ ತಾಲೂಕಿನ ೩ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು ಮಾಹಿತಿ ನೀಡಿದ್ದಾರೆ.
ಕೇಂದ್ರಗಳ ಸುತ್ತ ನಿಷೇಧಾಜ್ಞೆ
ತಾ. ೨೨ ರಿಂದ ಮೇ, ೧೮ ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಆರಕ್ಷಕ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಸಾಮಾನ್ಯ ಮೊಬೈಲ್ (ಬೇಸಿಕ್ ಮೊಬೈಲ್) ಮಾತ್ರ ಇರಿಸಿಕೊಳ್ಳಬಹುದಾಗಿದ್ದು, ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟಾçನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬAಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ ಎಂದು ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ: ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜು, ನಾಪೋಕ್ಲು, ಪೊನ್ನಂಪೇಟೆ, ಸೋಮವಾರಪೇಟೆ, ವಿರಾಜಪೇಟೆ, ಮಡಿಕೇರಿ, ಕುಶಾಲನಗರ, ನೆಲ್ಯಹುದಿಕೇರಿ, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಮತ್ತು ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.