ಮಡಿಕೇರಿ, ಏ. ೨೧: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರ ಅನುದಾನದಿಂದ ಸಹಕಾರ ಸಂಘಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಎಲೆಕ್ಟಾçನಿಕ್ ಉಪಕರಣ ವಿತರಣಾ ಕಾರ್ಯಕ್ರಮ ತಾ. ೨೨ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕೊಡವ ಸಮಾಜದಲ್ಲಿ ನಡೆಯಲಿದೆ.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕ ಕೊಡಂದೇರ ಪಿ. ಗಣಪತಿ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಎಂ.ಪಿ. ಸುಜಾ ಕುಶಾಲಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.