ಮಡಿಕೇರಿ, ಏ. ೨೧: ಜವಾಹರ್ ನವೋದಯ ವಿದ್ಯಾಲಯದಲ್ಲಿ ೬ನೇ ತರಗತಿಗಾಗಿ ೨೦೨೨-೨೩ನೇ ಸಾಲಿನ ಪ್ರವೇಶ ಪರೀಕ್ಷೆ ತಾ. ೩೦ ರಂದು ನಡೆಯಲಿದೆ.
ಪರೀಕ್ಷೆಗೆ ಹಾಜರಾಗುವ ಎಲ್ಲಾ ನೋಂದಾಯಿತ ಅಭ್ಯರ್ಥಿಗಳ ಪ್ರವೇಶ ಪತ್ರಗಳು ನವೋದಯ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ನೋಂದಾವಣೆ ಸಂಖ್ಯೆ ಬಳಸಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗದೇ ಇರುವ ಕೊಡಗು ಜಿಲ್ಲೆಯ ಅಭ್ಯರ್ಥಿಗಳು ತಾವು ೫ನೇ ತರಗತಿ ಓದಿದ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಥವಾ ನವೋದಯ ವಿದ್ಯಾಲಯ ಕಚೇರಿ ಸಿಬ್ಬಂದಿಯನ್ನು ಸಂಪರ್ಕಿಸಿ ವಿದ್ಯಾಲಯದಿಂದ ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ ಎಂದು ಪ್ರಾಂಶುಪಾಲ ಪಂಕಜಾಕ್ಷನ್ ಓ.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರವೇಶ ಪತ್ರಗಳನ್ನು ಈ ವೆಬ್ ವಿಳಾಸದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. hಣಣಠಿs://ಟಿಚಿvoಜಚಿಥಿಚಿ.gov.iಟಿ/ಟಿvs/eಟಿ/ಊome೧# ಹಾಗೂ ಹೆಚ್ಚಿನ ಮಾಹಿತಿಗೆ ೭೭೬೦೮೯೮೧೪೮ ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.