ಮುಳ್ಳೂರು, ಏ. ೨೧: ಸಮೀಪದ ಬೆಸೂರು ಗ್ರಾ.ಪಂ.

ವ್ಯಾಪ್ತಿಯ ದೊಡ್ಡಭಂಡಾರ ಗ್ರಾಮದಲ್ಲಿ ರೂ. ೩೬ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಮಲ್ಲೇಶ್ವರ ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ರೂ. ೨ ಲಕ್ಷ ಆರ್ಥಿಕ ನೆರವು ನೀಡಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರೋಹಿತ್ ರೂ. ೨ ಲಕ್ಷ ಚೆಕ್‌ಅನ್ನು ದೇವಾಲಯ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಾಲಯ ಸಮಿತಿ ಕಾರ್ಯದರ್ಶಿ ಡಿ.ಟಿ. ಶೇಷೇಗೌಡ, ಪದಾಧಿಕಾರಿಗಳಾದ ಬಿ.ಎಂ. ಚಂದ್ರೇಗೌಡ, ಅಶೋಕ್, ಮಂಜುನಾಥ್, ಡಿ.ಆರ್. ಹರೀಶ್, ದೇವಾಲಯ ಸಮಿತಿ ಸದಸ್ಯರು, ಗ್ರಾಮಸ್ಥರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಿಬ್ಬಂದಿ ಹಾಜರಿದ್ದರು.