ಮಡಿಕೇರಿ, ಏ. ೨೧: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಕೇಂದ್ರ ಸರ್ಕಾರದ ಯೋಜನೆ ಯಾಗಿದ್ದು, ೧-೧೨-೨೦೧೮ ರಿಂದ ಪ್ರಾರಂಭವಾಗಿದೆ.

ದೇಶದ ಎಲ್ಲ ರೈತ ಕುಟುಂಬಗಳಿಗೆ ಆದಾಯ ಬೆಂಬಲ ನೀಡುವ ಉದ್ದೇಶದಿಂದ ಕೃಷಿ ಭೂಮಿ ಹೊಂದಿರುವ ರೈತರಿಗೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಯೋಜನೆಯೇ ಪಿಎಂ ಕಿಸಾನ್ ಸಮ್ಮಾನ ನಿಧಿ. ಈ ಯೋಜನೆಯಲ್ಲಿ ಪ್ರತಿ ವರ್ಷ ಆರು ಸಾವಿರ ರೂಪಾಯಿಗಳನ್ನು ಮೂರು ಸಮಾನ ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಸಿಎಸ್‌ಸಿ ಗಳಲ್ಲಿ (ಕಾಮನ್ ಸರ್ವಿಸ್ ಸೆಂಟರ್ ಗಳಲ್ಲಿ) ರೈತರು ನೋಂದಣಿ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಡಾಟಾ ಬೇಸ್‌ನಲ್ಲಿರೋ ಮಾಹಿತಿಯನ್ನು ಆಧಾರ್ ಡಾಟಾ ಬೇಸ್‌ನಲ್ಲಿರೋ ರೀತಿಯಲ್ಲಿ ತಿದ್ದುಪಡಿ ಮಾಡಲು ಅವಕಾಶವಿದೆ. ಈವರೆಗೆ ೧೨.೩೫ ಕೋಟಿ ಕುಟುಂಬಗಳು ಈ ಯೋಜನೆ ಯಲ್ಲಿ ಹೆಸರು ನೋಂದಾಯಿಸಿ ಕಿಸಾನ್ ಕ್ರೆಡಿಟ್ ಕಾರ್ಡನ್ನು ಬ್ಯಾಂಕಿAಗ್ ವ್ಯವಸ್ಥೆಯ ಮೂಲಕ ಪಡೆದುಕೊಂಡಿದ್ದಾರೆ. ದೇಶಾದ್ಯಂತ ಪೂರ್ಣ ಪ್ರಮಾಣದಲ್ಲಿ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ನ ಲಾಭ ಪಡೆದುಕೊಂಡಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ಸೂಚನೆಯ ಮೇರೆಗೆ ರಾಜ್ಯ ಬ್ಯಾಂಕರ್‌ಗಳ ಸಲಹಾ ಸಮಿತಿಯ ಆದೇಶದಂತೆ ಪತ್ರಿಕಾ ಪ್ರಕಟಣೆ ನೀಡಲಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಲ್ಲಿ ಹೆಸರು ನೋಂದಾಯಿಸಲ್ಪಟ್ಟು ಬ್ಯಾಂಕಿAಗ್ ವ್ಯವಸ್ಥೆಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯದೆ ಇದ್ದವರು ತಾ. ೨೪ ರಿಂದ ತಾ. ೩೦ ರೊಳಗೆ ಹತ್ತಿರದ ಬ್ಯಾಂಕನ್ನು ಸಂಪರ್ಕಿಸಿ ರೈತರು ಈ ಯೋಜನೆಯ ಲಾಭ ಪಡೆಯಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕಿನ ಶಾಖಾ ವ್ಯವಸ್ಥಾಪ ಕರುಗಳಿಗೆ ಪಿಎಂ ಕಿಸಾನ್ ಫಲಾನುಭವಿಗಳಿಗೆ ನಿಯಮಾನುಸಾರ ಆದ್ಯತೆ ಮೇರೆಗೆ ಬೆಳೆಸಾಲ (ಕೆಸಿಸಿ) ವಿತರಿಸಲು ಸೂಚಿಸಲಾಗಿದೆ. ನಮ್ಮ ಜಿಲ್ಲೆಯಲ್ಲಿ ರಾಷ್ಟಿçÃಕೃತ ಬ್ಯಾಂಕ್, ಗ್ರಾಮೀಣ ಬ್ಯಾಂಕುಗಳು ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳಿAದ ೩೧.೦೩.೨೦೨೨ ರವರೆಗೆ ೯೯೮೪೬ ರೈತರ ಬೆಳೆ ಸಾಲ ಚಾಲ್ತಿಯಲ್ಲಿರುವ ಸಂಖ್ಯೆ ಆಗಿದ್ದು, ಇಲ್ಲಿಯವರೆಗೆ ೫೮.೪೨ ಲಕ್ಷ ರೈತರು ಕರ್ನಾಟಕದಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ೫೨,೦೧೦ ರೈತರು ನೋಂದಣಿ ಮಾಡಿಕೊಂಡಿದ್ದು ಕಿಸಾನ್ ಸಮ್ಮಾನ ನಿಧಿಯ ಫಲಾನುಭವಿಗಳಾಗಿದ್ದಾರೆ.

ತಾ. ೨೪ ಪಂಚಾಯತ್ ರಾಜ್ ದಿನದಂದು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿರುವ ‘ಕಿಸಾನ್ ಭಾಗೇಧಾರಿ ಪ್ರಾಥಮಿಕತಾ ಹಮಾರಿ’ ಎಂಬ ವಿನೂತನ ಕಾರ್ಯಕ್ರಮ ಚಾಲನೆಗೊಳ್ಳುತ್ತಿದ್ದು, ಪಿಎಮ್ ಕಿಸಾನ್ ಯೋಜನೆಯಲ್ಲಿ ಫಲಾನುಭವಿ ಗಳಾಗಿದ್ದು, ಈವರೆಗೆ ಕೃಷಿ ಸಾಲ ಪಡೆಯದವರು ಕೃಷಿ ಸಾಲವನ್ನು ಹತ್ತಿರದ ಬ್ಯಾಂಕ್‌ಗಳಲ್ಲಿ ಪಡೆದು ಕೊಳ್ಳುವುದರ ಜೊತೆಗೆ ಪ್ರಧಾನ ಮಂತ್ರಿಗಳ ಸಾಮಾಜಿಕ ಸುರಕ್ಷಾ ಯೋಜನೆಗಳಾದ ಪಿಎಂಎಸ್‌ಬಿವೈ, ಪಿಎಂಜೆಜೆಬಿವೈ ಹಾಗೂ ಅಟಲ್ ಪಿಂಚಣಿ ಯೋಜನೆಗಳಿಗೂ ಕೂಡಾ ಹೊಸದಾಗಿ ಸೇರ್ಪಡೆಗೊಳ್ಳಬಹುದು ಎಂದು ಲೀಡ್ ಬ್ಯಾಂಕ್ ಮುಖ್ಯಸ್ಥ ಆರ್.ಕೆ. ಬಾಲಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.