ಸುಂಟಿಕೊಪ್ಪ, ಏ. ೨೧: ಗುಡ್ಡಪ್ಪ ರೈ ಬಡಾವಣೆಯ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಮಂಗಳವಾರ ನೆರವೇರಿತು.

ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತ ಗೊಳಿಸಲಾಯಿತು. ದೇವಿಗೆ ಬೆಳಿಗ್ಗೆ ೭ ಗಂಟೆಯಿAದ ವಿಶೇಷ ಪೂಜಾ ಕಾರ್ಯಕ್ರಮ ನಡೆದು ನಂತರ ೯.೩೦ರಿಂದ ೧೧ ಗಂಟೆವರೆಗೆ ದೇವಿ ಅರ್ಪಣೆ ನಡೆಯಿತು. ಮಧ್ಯಾಹ್ನ ೧ ಗಂಟೆಗೆ ಮಹಾಪೂಜೆ ನೆರವೇರಿಸಲಾಯಿತು. ಮಹಾ ಮಂಗಳಾರತಿಯೊAದಿಗೆ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.

೨.೩೦ ಗಂಟೆಯಿAದ ೪ ಗಂಟೆಯವರೆಗೆ ಅನ್ನ ಸಂತರ್ಪಣೆ ಮಾಡಲಾಯಿತು. ಸುಂಟಿಕೊಪ್ಪ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದ ನೂರಾರು ಭಕ್ತಾದಿಗಳು ಆಗಮಿಸಿ ಹರಕೆಗಳನ್ನು ಒಪ್ಪಿಸಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು.

ಈ ಹಿಂದೆ ಕೊರೊನಾ ಬಂದ ಹಿನ್ನೆಲೆ ವಾರ್ಷಿಕ ಪೂಜೆಯನ್ನು ನಡೆಸಲಾಗಲಿಲ್ಲ ಗ್ರಾಮದ ಸುತ್ತಮುತ್ತಲಿನ ನೂರಾರು ಭಕ್ತಾದಿಗಳು. ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡರು ಈ ಸಂದರ್ಭ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ಸಮಿತಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.