ಮಡಿಕೇರಿ, ಏ.೨೨: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಸಹಕಾರ ಸಂಘಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಉಚಿತವಾಗಿ ನೀಡಲಾಗುತ್ತಿರುವ ಎಲೆಕ್ಟಾçನಿಕ್ ಉಪಕರಣಗಳ ಸದುಪಯೋಗವನ್ನು ಎಲ್ಲಾ ಸಹಕಾರ ಬ್ಯಾಂಕ್‌ಗಳು ಪಡೆದುಕೊಳ್ಳುವಂತೆ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರ ಅನುದಾನದಿಂದ ಸಹಕಾರ ಸಂಘಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ನಗರದ ಕೊಡವ ಸಮಾಜದಲ್ಲಿ ಏರ್ಪಡಿಸ ಲಾಗಿದ್ದ ಎಲೆಕ್ಟಾçನಿಕ್ ಉಪಕರಣ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಫ್ರೂಟ್ ಆ್ಯಪ್ ತಂತ್ರಾAಶವನ್ನು ಸರ್ಕಾರ ರೈತರ ಒಳಿತಿಗಾಗಿ ಜಾರಿಗೊಳಿಸಿದೆ. ಕೇಂದ್ರ ಸರ್ಕಾರದ ಯೋಜನೆ ಆಗಿದ್ದು, ಯಾವುದೇ ರೀತಿಯ ಅವ್ಯವಹಾರಗಳು ನಡೆಯ ಬಾರದು ಎಂಬ ದೃಷ್ಟಿಕೋನದಿಂದ ಫ್ರೂಟ್ ತಂತ್ರಾAಶ ಜಾರಿಗೊಳಿಸಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಅನ್ನು ಅಪೆಕ್ಸ್ ಬ್ಯಾಂಕಿಗೆ ವಿಲೀನ ಮಾಡಬೇಕೆಂಬ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ರೈತರ/ಜನರ ವಿರುದ್ಧವಾಗಿ ಯಾವುದೇ ಯೋಜನೆಗಳನ್ನು ಜಾರಿ ಗೊಳಿಸುವುದಿಲ್ಲ. ಸರ್ಕಾರದ ಜೊತೆ ಈ ಸಂಬAಧ ಚರ್ಚೆ ನಡೆಸ ಲಾಗುವುದು, ಸಹಕಾರ ಸಂಘಗಳು ರೈತರಿಗೆ ಸಾಲ ಸೌಲಭ್ಯಗಳ ಮೂಲಕ ಸಹಾಯ ಮಾಡುತ್ತಾ ಬಂದಿದ್ದು. ಸಹಕಾರ ಸಂಘಗಳು ರೈತರಿಗೆ ಸಹಕಾರಿಯಾಗಿದೆ. ಸಹಕಾರ ಸಂಘಗಳು ಉಳಿಯುವುದರ ಜೊತೆಗೆ ರೈತರನ್ನು ಆರ್ಥಿಕವಾಗಿ ಪ್ರಬಲರನ್ನಾಗಿಸಲು ಸಹಕಾರಿ ಯಾಗಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಮಾತನಾಡಿ ಸಹಕಾರ ಸಂಘಗಳ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮತ್ತು ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಸಹಕಾರ ಬ್ಯಾಂಕ್‌ಗಳು ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಸಹಕಾರ ಬ್ಯಾಂಕುಗಳು ಜಿಲ್ಲೆಯಲ್ಲಿ ಉತ್ತಮ ವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ ಮಾತನಾಡಿ ರೈತರ ಕಣ್ಣೀರು ಒರೆಸುವ ಕೆಲಸ ಸಹಕಾರ ಸಂಘಗಳಿAದ ಆಗುತ್ತಿದೆ. ರೈತಪರವಾದ ಸಹಕಾರ ಸಂಘವು ಜಿಲ್ಲೆಯಲ್ಲಿದೆ, ರೈತಪರವಾದ ಸರ್ಕಾರ ಕರ್ನಾಟಕ ರಾಜ್ಯದಲ್ಲಿದೆ. ರೈತರ ವಿರುದ್ಧವಾದ ಯಾವುದೇ ನಿಯಮಗಳನ್ನು ಮತ್ತು ಯೋಜನೆ ಗಳನ್ನು ಸರ್ಕಾರ ಜಾರಿ ಗೊಳಿಸುವುದಿಲ್ಲ. ರೈತರ ಬೇಡಿಕೆಯನ್ನು ಸರ್ಕಾರಕ್ಕೆ ತಲುಪಿಸುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಮಾತನಾಡಿ ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್‌ಗಳು ಯಾವುದೇ ರೀತಿಯಾದ ಕಪ್ಪು ಚುಕ್ಕಿ ಬಾರದ ರೀತಿಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತಿದೆ. ಮುಂದಿನ ಪೀಳಿಗೆಗೆ ಉತ್ತಮವಾದ ಬುನಾದಿಯನ್ನು ಹಾಕುವ ದೃಷ್ಟಿಯಿಂದ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದೆ ಎಂದರು.
ಬ್ಯಾಂಕಿನ ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ, ನಿರ್ದೇಶಕರುಗಳಾದ ಬಿ.ಕೆ. ಚಿಣ್ಣಪ್ಪ, ಪಟ್ರಪಂಡ ಬಿ. ರಘುನಾಣಯ್ಯ, ಹೊಟ್ಟೆಂಗಡ ಎಂ ರಮೇಶ್, ಹೊಸೂರು ಜೆ ಸತೀಶ್‌ಕುಮಾರ್, ಕಿಮ್ಮುಡೀರ ಎ ಜಗದೀಶ್, ಅರುಣ್ ಬೀಮಯ್ಯ, ಎ.ಗೋಪಾಲಕೃಷ್ಣ, ಪ್ರಧಾನ ವ್ಯವಸ್ಥಾಪಕಿ ಎ.ಎಸ್.ಪಾರ್ವತಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಪ್ರಸ್ತುತ ಫ್ರೂಟ್ ತಂತ್ರಾAಶದ ಮೂಲಕ ಬೆಳೆ ಸಾಲ ವಿತರಣೆ ಮಾಡುವ ಕ್ರಮದಿಂದ ಎದುರಿಸುತ್ತಿರುವ ಸಂಕಷ್ಟಗಳನ್ನು ಸಭೆಯು ಆಲಿಸಿ, ಸದಸ್ಯ ಸಹಕಾರ ಸಂಘಗಳ ಸಂಕಷ್ಟವನ್ನು ಅರಿತು ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಪರವಾಗಿ ಜಿಲ್ಲಾ ಬ್ಯಾಂಕಿನ ಅಧ್ಯಕ್ಷರು ರಾಜ್ಯದ ಸಹಕಾರ ಸಚಿವರಿಗೆ ಬಿನ್ನವತ್ತಳೆಯನ್ನು ನೀಡುವಂತೆ ತೀರ್ಮಾನಿಸಲಾಯಿತು.
ಪ್ರಾರ್ಥನೆಯನ್ನು ಬ್ಯಾಂಕಿನ ಅಧಿಕಾರಿಗಳಾದ ಬೋಜಮ್ಮ ಮತ್ತು ಲತಾ ನೆರವೇರಿಸಿದರು. ಬ್ಯಾಂಕಿನ ನಿರ್ದೇಶಕ ಹೊಸೂರು ಜೆ. ಸತೀಶ್‌ಕುಮಾರ್ ವಂದಿಸಿದರು. ನಿರೂಪಣೆಯನ್ನು ಬ್ಯಾಂಕಿನ ಎ.ಜಿ.ಎಂ. ಗಿರೀಶ್ ಕುಮಾರ್ ನಿರ್ವಹಿಸಿದರು.