ಕೂಡಿಗೆ, ಏ. ೨೨: ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಕಾಯ್ದಿರಿಸಿದ ಜಾಗದಲ್ಲಿ ನಿವೇಶನ ರಹಿತರಿಗೆ ಕಂದಾಯ ಇಲಾಖೆಯಿಂದ ನಿಯಮನುಸಾರವಾಗಿ ಅರ್ಹ ಫಲಾನುಭವಿಗಳಿಗೆ ವಸತಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ಕೂಡಿಗೆಗೆ ಭೇಟಿ ನೀಡಿದ್ದ ಸಂದರ್ಭ ನಿವೇಶನ ರಹಿತರ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಬ್ಯಾಡಗೊಟ್ಟ ಮತ್ತು ಹುದುಗೂರು ವ್ಯಾಪ್ತಿಯಲ್ಲಿ ಈಗಾಗಲೇ ನಿಗದಿಯಾದ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನವನ್ನು ಕಂದಾಯ ಇಲಾಖೆಯ ನಿಯಮನುಸಾರವಾಗಿ ಅರ್ಹ ಫಲಾನುಭವಿಗಳಿಗೆ ನೀಡಲಾಗು ವುದು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಕಡೆಗಳಲ್ಲಿ ಜಾಗವನ್ನು ಗುರುತಿಸಲಾಗಿದೆ. ಸ್ಥಳೀಯ ಮತ್ತು ಕಂದಾಯ ಇಲಾಖೆ ದಾಖಲೆಗಳ ಆಧಾರದ ಮೇಲೆ ಸ್ಥಳ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳಿಗೆ ನಿವೇಶನವನ್ನು ನೀಡಲಾಗುವುದು ಎಂದರು.

ಈ ಸಂದರ್ಭ ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು ಮಾಡ್ಲಿಗೌಡ, ಕೂಡುಮಂಗಳೂರು ಬಿಜೆಪಿ ಶಕ್ತಿ ಕೇಂದ್ರದ ಪ್ರವೀಣ್, ಮಂಜುನಾಥ ಸೇರಿದಂತೆ ಬೂತ್ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.