ಕೂಡಿಗೆ, ಏ. ೨೨: ಇಲ್ಲಿಗೆ ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿಗೆ ಯುನಿಸೆಫ್ ಸಹಯೋಗದ ಏIಐಂ (ಏeಡಿಚಿಟಚಿ sಣಚಿಣe iಟಿsಣiಣuಣe oಜಿ ಟoಛಿಚಿಟ ಚಿಜmiಟಿisಣಡಿಚಿಣioಟಿ) ಸಂಸ್ಥೆಯ ಪ್ರತಿನಿಧಿಗಳ ಭೇಟಿ ನೀಡಿ ಗ್ರಾಮ ಪಂಚಾಯಿತಿಯ ಸಂಪೂರ್ಣವಾದ ಮಾಹಿತಿಯನ್ನು ಪಡೆದರು.

ಈ ತಂಡ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಆಯವ್ಯಯ ಪ್ರಕ್ರಿಯೆ ಅನುಷ್ಠಾನಗೊಳಿಸುವ ಸಲುವಾಗಿ ರಾಜ್ಯದ ಗ್ರಾಮ ಪಂಚಾಯಿತಿಗಳ ಅಧ್ಯಯನದ ಭಾಗವಾಗಿ ಕೊಡಗು ಜಿಲ್ಲೆಯ ಹೊದ್ದೂರು ಮತ್ತು ಮುಳ್ಳುಸೋಗೆ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿದೆ.

ಕಳೆದ ೩ ವರ್ಷಗಳ ಅವಧಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಕ್ಕಳ ವಿಕಸನಕ್ಕಾಗಿ ಗ್ರಾಮ ಪಂಚಾಯಿತಿಯಲ್ಲಿ ಕೈಗೊಂಡ ವಿನೂತನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಂದಿಬಸವನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಗಳ ಮೂಲಭೂತ ಸೌಲಭ್ಯಗಳು ಮಕ್ಕಳ ಕಲಿಕೆ ಶೈಕ್ಷಣಿಕ ಪ್ರಗತಿ ಇತ್ಯಾದಿ ಮಾಹಿತಿಗಳನ್ನು ಪಡೆದುಕೊಂಡರು

ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷ ಚಲುವರಾಜ್ ಉಪಾಧ್ಯಕ್ಷೆ ಜಯಮ್ಮ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸುಮೇಶ್, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಹಾಜರಿದ್ದರು.