ಮಡಿಕೇರಿ, ಏ.೨೨: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ತಾ. ೨೩ ರಿಂದ ಮೇ ೨ರವರೆಗೆ ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಲಿದ್ದು, ಈ ಕಾರ್ಯವನ್ನು ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪçಕಿçಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ದತ್ತವಾದ ಅದಿsಕಾರದಂತೆ ಮೌಲ್ಯಮಾಪನ ಕೇಂದ್ರದ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪçದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ. ನಿರ್ಬಂಧಿತ ಪ್ರದೇಶದ ಒಳಗೆ ಮೌಲ್ಯಮಾಪನ ಕಾರ್ಯದ ಅಧಿಕಾರಿ/ ಸಿಬ್ಬಂದಿಗಳನ್ನು ಹೊರತುಪಡಿಸಿ, ಉಳಿದಂತೆ ಯಾರೇ ವ್ಯಕ್ತಿಗಳಿಗೆ ಪ್ರವೇಶ ಇರುವುದಿಲ್ಲ. ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾದಿsಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.