ಮಡಿಕೇರಿ, ಏ. ೨೨: ನಗರಸಭೆಯಿಂದ ನಗರೋತ್ಥಾನ ಯೋಜನೆಯಡಿಯಲ್ಲಿ ಉದ್ದೇಶಿಸಿರುವ ರೂ.೧ ಕೋಟಿ ವೆಚ್ಚದ ವಾಣಿಜ್ಯ ಸಂಕೀರ್ಣ ಹಾಗೂ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ರೂ. ೨೦ ಲಕ್ಷ ವೆಚ್ಚದ ಶೌಚಾಲಯ ನಿರ್ಮಾಣಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಬಳಿಯಲ್ಲಿರುವ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಅಲ್ಲಿ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಅಪ್ಪಚ್ಚು ರಂಜನ್, ೨ ಅಂತಸ್ತಿನ ಸುಸಜ್ಜಿತ ವಾಣಿಜ್ಯ

(ಮೊದಲ ಪುಟದಿಂದ) ಮಳಿಗೆ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದರೊಂದಿಗೆ ಜನರ ಬೇಡಿಕೆಯಂತೆ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಅಮೃತ ನಿರ್ಮಲ ಯೋಜನೆಯಡಿಯಲ್ಲಿ ರೂ. ೨೦ ಲಕ್ಷ ವೆಚ್ಚದಲ್ಲಿ ಶೌಚಾಲಯ ನಿರ್ಮಿಸಲು ಕಾರ್ಯಯೋಜನೆ ರೂಪಿಸಿದ್ದು, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು. ಈ ಸಂದರ್ಭ ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಪೌರಾಯುಕ್ತ ಎಸ್.ವಿ. ರಾಮದಾಸ್, ನಗರಸಭಾ ಸದಸ್ಯರಾದ ಕೆ.ಎಸ್. ರಮೇಶ್, ಎಸ್.ಸಿ. ಸತೀಶ್, ಮಂಜುಳಾ, ಚಂದ್ರು, ಸಬಿತಾ, ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್ ಸೇರಿದಂತೆ ಇನ್ನಿತರರು ಹಾಜರಿದ್ದರು.