ಕುಶಾಲನಗರ, ಏ. ೨೨: ಕನ್ನಡ ಸಾಹಿತ್ಯ ಪರಿಷತ್ತಿನ ಹೆಬ್ಬಾಲೆ, ಶಿರಂಗಾಲ, ತೊರೆನೂರು ಹಾಗೂ ಕೂಡಿಗೆ ವ್ಯಾಪ್ತಿಯ ಸದಸ್ಯರ ಸಭೆಯನ್ನು ತಾ. ೨೩ ರಂದು (ಇಂದು) ಸಂಜೆ ೫.೩೦ ಗಂಟೆಗೆ ಹೆಬ್ಬಾಲೆಯ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಪರಿಷತ್ತಿನ ಜಿಲ್ಲಾಧ್ಯಕ್ಷ ಕೇಶವಕಾಮತ್ ಹಾಗೂ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅವರು ಭಾಗವಹಿಸಲಿದ್ದಾರೆ ಎಂದು ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್. ಮೂರ್ತಿ ತಿಳಿಸಿದ್ದಾರೆ.