*ಗೋಣಿಕೊಪ್ಪ, ಏ. ೨೨: ಜಿಲ್ಲಾ ಪ್ರಬುದ್ಧರ ಪ್ರಕೋಷ್ಠ ಭಾರತೀಯ ಜನತಾ ಪಕ್ಷದ ವತಿಯಿಂದ ಸ್ವಚ್ಛ ಭಾರತ್ ಅಭಿಯಾನ ಹಾಗೂ ವಿಶ್ವ ಪಾರಂಪರಿಕ ದಿನಾಚರಣೆಯನ್ನು ಆಚರಿಸಲಾಯಿತು.

ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಪ್ರಬುದ್ದರ ಪ್ರಕೋಷ್ಠದ ಪದಾಧಿಕಾರಿಗಳು ಪೊನ್ನಂಪೇಟೆ ಸರ್ಕಾರಿ ಪಬ್ಲಿಕ್ ಪ್ರೌಢಶಾಲೆಯಿಂದ ತಾಲೂಕು ಪಂಚಾಯಿತಿ ಕಚೇರಿವರೆಗಿನ ರಸ್ತೆಯ ಎರಡೂ ಬದಿಗಳಲ್ಲಿ ಇದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದರು.

ನಂತರ ತಾಲೂಕು ಶಿಶು ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಪ್ರಬುದ್ಧರ ಪ್ರಕೋಷ್ಠ ಜಿಲ್ಲಾ ಸಂಚಾಲಕ ಮುಂಡAಡ ಸಿ. ನಾಣಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸವಿಲೇವಾರಿ ನಿರ್ವಹಣೆ ಮಾಡುವ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ನಿರ್ಮಲ ಭಾರತದ ನಿರ್ಮಾಣಕ್ಕೆ ಪ್ರತಿಯೊಬ್ಬ ಪ್ರಜೆಯು ತನ್ನ ಕರ್ತವ್ಯವನ್ನು ಶೃದ್ಧೆಯಿಂದ ನಿರ್ವಹಿಸಬೇಕಾಗಿದೆ. ಮೋದಿ ಕಂಡ ಸ್ವಚ್ಛ ಭಾರತ ಕನಸ್ಸನ್ನು ನನಸು ಮಾಡುವ ಜವಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದರು.

ಪೊನ್ನAಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ವೆಂಕಟೇಶ್ ಮತ್ತು ಉಪಾಧ್ಯಕ್ಷೆ ಬೊಟ್ಟಂಗಡ ದಶಮಿ ದೇಚಮ್ಮ ಮಾತನಾಡಿ, ಕಸ ವಿಲೇವಾರಿ ಸಮಸ್ಯೆಯನ್ನು ಸೂಕ್ತವಾಗಿ ಬಗೆಹರಿಸಲು ಸಾರ್ವಜನಿಕರು ಪಂಚಾಯಿತಿಯೊAದಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

ಪಂಚಾಯಿತಿ ಸದಸ್ಯರುಗಳಾದ ರಾಮಕೃಷ್ಣ, ಮಂಜುಳಾ, ವಿಜಯ, ಆರತಿ ಸುರೇಶ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಸಹ ಸಂಚಾಲಕ ಕೆಂಚಪ್ಪ, ಸದಸ್ಯರುಗಳಾದ ಎನ್.ಕೆ. ಮೋಹನ್, ಭೀಮಯ್ಯ, ಶೈಲ, ಚೆರಿಸುಬ್ರಮಣಿ, ಆರ್. ಮೋಹನ್ ಉಪಸ್ಥಿತರಿದ್ದರು.