ಮಡಿಕೇರಿ, ಏ. ೨೨: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೦೨ ರ ನವೆಂಬರ್ ೪ ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ.
ಸಾಂತ್ವನ ಕೇಂದ್ರದಲ್ಲಿ ಈವರೆಗೆ ೪,೪೮೨ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಇದುವರೆಗೆ ೪,೪೬೬ ಪ್ರಕರಣಗಳು ಇತ್ಯರ್ಥಗೊಂಡಿವೆ. ೨೦೨೧-೨೨ನೇ ಆರ್ಥಿಕ ಸಾಲಿನಲ್ಲಿ ಒಟ್ಟು ೨೮೧ ಪ್ರಕರಣಗಳು ದಾಖಲಾಗಿ ೨೬೫ ಪ್ರಕರಣಗಳು ಇತ್ಯರ್ಥಗೊಂಡು ಉಳಿದ ೧೬ ಪ್ರಕರಣಗಳು ಇತ್ಯರ್ಥದ ಹಂತದಲ್ಲಿವೆ.
ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ. ೩.೯೫ ಲಕ್ಷಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ನೊಂದವರಿಗೆ ೨೦೨೧-೨೨ನೇ ಸಾಲಿನಲ್ಲಿ ಪರಿಹಾರ ಕೊಡಿಸಿಕೊಡಲಾಗಿದೆ ಎಂದು ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್. ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ಆರ್. ನಮಿತ ರೈ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ. ೯೮೮೦೯೮೫೯೩೯ ನ್ನು ಸಂಪರ್ಕಿಸಬಹುದು.