ಮಡಿಕೇರಿ, ಏ. ೨೩: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಲಯದಲ್ಲಿ ತಾ. ೨೬ರಂದು ಅಕಾಡೆಮಿಯ ೨೮ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಚಿರಿಯಪಂಡ ಎಂ. ರಾಜಾ ನಂಜಪ್ಪ, ಪೊನ್ನಂಪೇಟೆ ಅಪ್ಪಚ್ಚಕವಿ ವಿದ್ಯಾಲಯದ ಅಧ್ಯಕ್ಷ ಮಂಡಚAಡ ದಿನೇಶ್ ಚಿಟ್ಟಿಯಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಕಾಳಿಮಾಡ ಮೋಟಯ್ಯ, ಕೊರಕುಟ್ಟಿರ ಸರಚಂಗಪ್ಪ ಹಾಗೂ ಬೆಕ್ಕೆಸೊಡ್ಲೂರು ಸಮಾಜ ಸೇವಕರಾದ ಮಾಚಿಮಾಡ ರವೀಂದ್ರ ಇವರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶತಮಾನೋತ್ಸವದ ಸಂಚಿಕೆಯಾದ ಬಾಚಮಾಡ ಡಿ. ಗಣಪತಿ ಸ್ಮರಣ ಸಂಚಿಕೆ ಹಾಗೂ ಐಚೆಟ್ಟಿರ ಮಾ. ಮುತ್ತಣ್ಣ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಗುವುದು. ನಂತರ ಕೊಡವ ಪಡಿಪು-೧ ಕಲಿತು ಪರೀಕ್ಷೆ ಬರೆದ ಮಕ್ಕಳಿಗೆ ಅಕಾಡೆಮಿ ವತಿಯಿಂದ ಪ್ರಮಾಣ ಪತ್ರವನ್ನು ವಿತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷರು ತಿಳಿಸಿದ್ದಾರೆ.