ಮಡಿಕೇರಿ, ಏ. ೨೩: ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ತಾ. ೧೮ ರಂದು ಗುರುತಿಸಲಾದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಸಂಭವನೀಯ ಪಟ್ಟಿಯನ್ನು ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಈ ಬಗ್ಗೆ ಸಂಬAಧಿಸಿದವರಿAದ ಆಕ್ಷೇಪಣೆಗಳಿದ್ದಲ್ಲಿ ತಾ. ೨೮ರ ಸಂಜೆ ೫.೩೦ ಗಂಟೆಯೊಳಗೆ ಸೂಕ್ತ ದಾಖಲಾತಿಯೊಂದಿಗೆ ಮನವಿಯನ್ನು ಖುದ್ದಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಪೊನ್ನಂಪೇಟೆ ಇಲ್ಲಿಗೆ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪೊನ್ನಂಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.