ಮಡಿಕೇರಿ, ಏ. ೨೫: ಶಿಥಿಲಾವಸ್ಥೆಯಲ್ಲಿರುವ ನಗರದ ಪುರಾತನ ಕೋಟೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕೈಗೆತ್ತ್ತಿಕೊಂಡಿರುವ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಪರಿಶೀಲನೆ ನಡೆಸಿದರು.

ನಿವೃತ್ತ ಕೆಎಎಸ್ ಅಧಿಕಾರಿ ವಿರೂಪಾಕ್ಷಯ್ಯ ಕಾಮಗಾರಿ ತ್ವರಿತ ಹಾಗೂ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆ ಕೋರ್ಟ್ ‘ಪಿರಿಯಾಡಿಕಲ್ ಇನ್ಸ್ಪೆಕ್ಷನ್’ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿತ್ತು. ಅದರಂತೆ ಅರ್ಜಿದಾರ ವಿರೂಪಾಕ್ಷಯ್ಯ ಸಹಿತ ಅಧಿಕಾರಿಗಳ ಜೊತೆಗೆ ಜಿಲ್ಲಾಧಿಕಾರಿ ಕೋಟೆ ಕಾಮಗಾರಿ ಪರಿವೀಕ್ಷಣೆ ನಡೆಸಿದರು.

ಕಾಮಗಾರಿ ತೃಪ್ತಿದಾಯಕ ವಾಗಿದೆ. ಆದರೆ, ವೇಗವಾಗಿ ಮಾಡಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ಈ ಸಂದರ್ಭ ತಹಶೀಲ್ದಾರ್ ಮಹೇಶ್, ಇಂಜಿನಿಯರ್ ಸುನಿಲ್, ನಿವೃತ್ತ ಇಂಜಿನಿಯರ್ ನಾಗರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.