ಮಡಿಕೇರಿ, ಏ. ೨೫: ಭಾರತೀಯ ನಾಗರೀಕ ಸೇವಾ ಪರೀಕ್ಷೆಯ ಮಹತ್ವ ಮತ್ತು ಪರೀಕ್ಷಾ ಪೂರ್ವಸಿದ್ಧತೆಯನ್ನು ಕುರಿತು ಅರಿವು ಮೂಡಿಸುವ ಉದ್ದೇಶದಿಂದ ತಾ. ೨೮ ರಂದು ಪೂರ್ವಾಹ್ನ ೧೧ ಗಂಟೆಗೆ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಾಗರೀಕ ಸೇವಾ ಪರೀಕ್ಷೆಯ ಒಳನೋಟ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಿ.ಐ.ಟಿ.ಯ ಹಳೆಯ ವಿದ್ಯಾರ್ಥಿ ಚೇತನ್ ಆರ್ ಅವರು UPSಅ ಪರೀಕ್ಷೆಯ ಸಿದ್ಧತೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೫೩೫೫೪೨೦೦೫ siಣe:-ತಿತಿತಿ.ಛಿiಣಛಿooಡಿg.eಜu.iಟಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.