ಕುಶಾಲನಗರ, ಏ. ೨೫: ಕುಶಾಲನಗರ ಪಟ್ಟಣ ವ್ಯಾಪ್ತಿಯ ಕಾವೇರಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.

ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ಹೊಳೆ ಯಲ್ಲಿ ಮೃತದೇಹ ಪತ್ತೆಯಾಗಿರುವು ದಾಗಿ ಕುಶಾಲನಗರ ಪೊಲೀಸರು ತಿಳಿಸಿದ್ದಾರೆ. ಅಂದಾಜು ೪೦ ವರ್ಷ ಪ್ರಾಯದ ಕಪ್ಪು ನೀಲಿ ಬಣ್ಣದ ಶರ್ಟ್, ನೇರಳೆ ಬಣ್ಣದ ಪ್ಯಾಂಟ್ ಧರಿಸಿರುವ ದುಂಡುಮುಖದ ಗೋಧಿ ಮೈಬಣ್ಣದ ಕುರುಹು ಪತ್ತೆಯಾಗಿದೆ.

ಈ ಬಗ್ಗೆ ಮಾಹಿತಿ ಸಿಕ್ಕಲ್ಲಿ ನಗರ ಪೊಲೀಸ್ ಠಾಣೆಗೆ ತಿಳಿಸುವಂತೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಕಂಟ್ರೋಲ್ ರೂಮ್ ೮೨೭೨-೨೨೮೩೩೦ ಅಥವಾ ಕುಶಾಲನಗರ ಟೌನ್ ಪೊಲೀಸ್ ಠಾಣೆ ೦೮೨೭೬ ೨೭೪ ೩೩೩ ಸಂಪರ್ಕಿಸುವAತೆ ಕೋರಿದ್ದಾರೆ.