ಪಾಲಿಬೆಟ್ಟ, ಏ. ೨೫: ಹುಣಸೂರಿನಲ್ಲಿ ವಾಹನ ಅಪಘಾತದಿಂದ ಮೃತಪಟ್ಟವರ ಕುಟುಂಬಗಳಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಪಾಲಿಬೆಟ್ಟದಲ್ಲಿರುವ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಅಪಘಾತ ದುರಂತದಲ್ಲಿ ಮೃತಪಟ್ಟವರ ಬಡ ಕುಟುಂಬಗಳಿಗೆ ಸರಕಾರ ವಿಶೇಷ ಪ್ರಕರಣದಡಿ ಸೂಕ್ತ ಪರಿಹಾರ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಎ.ಎಸ್.ನರೇನ್ ಕಾರ್ಯಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರ ಎ. ಎಸ್. ಟಾಟು ಮೊಣ್ಣಪ್ಪ, ಡಿಸಿಸಿ ಸದಸ್ಯ ಮುಕ್ಕಾಟಿರ ಸಂದೀಪ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಎನ್. ಪ್ರಥ್ಯು, ಕೆ.ಎಂ. ಬಾಲಕೃಷ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎಚ್. ವಿ. ರಾಮದಾಸ್, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಮಾಳೇಟಿರ ಸಾಬ ಕಾಳಪ್ಪ, ವಿಜೇಶ್, ಮಾಲ್ದಾರೆ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಜಿ ಥೋಮಸ್ ಮೊದಲಾದವರು ಹಾಜರಿದ್ದರು.