ನಾಪೋಕ್ಲು, ಏ. ೨೬: ಸಮೀಪದ ಕಕ್ಕಬ್ಬೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಬಿರುಸಿನ ಗಾಳಿ ಮಳೆಯಿಂದ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಯಿತು. ಕಕ್ಕಬೆ ಹೈಲ್ಯಾಂಡ್ಸ್ ಕ್ಲಬ್ ಬಳಿ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಸಂಜೆಯವರೆಗೂ ನಾಪೋಕ್ಲು-ವೀರಾಜಪೇಟೆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.