ಮಡಿಕೇರಿ, ಏ. ೨೬ : ಕೊಡವ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ ಯನ್ನು ಬಾಲ್ಯದಿಂದಲೇ ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು, ಪೋಷಕರು ಸಾಂಪ್ರಾದಾಯಿಕ ಕಾರ್ಯಕ್ರಮಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಮೂಲಕ ಹಿಂದಿನ ಪದ್ಧತಿಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸಹಕಾರಿ ಮಾಜಿ ಹೆಚ್ಚುವರಿ ರಿಜಿಸ್ಟಾçರ್ ಹಾಗೂ ಕೆಎಟಿ ನಿವೃತ್ತ ಸದಸ್ಯ ಕಲ್ಲುಮಾಡಂಡ ಜಿಮ್ಮಿ ಮಾದಯ್ಯ ತಿಳಿಸಿದ್ದಾರೆ.
ನಗರದ ಕೊಡವ ಸಮಾಜದಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕೊಡವಕೇರಿಯ ೧೫ನೇ ವರ್ಷದ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಎಲ್ಲಾ ಕೊಡವ ಕುಟುಂಬಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಕೊಡವಕೇರಿಗಳನ್ನು ಉಳಿಸಿ ಬೆಳೆಸಬೇಕು. ಫೀ. ಮಾ. ಕಾರ್ಯಪ್ಪ ಅವರ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಳಂಗAಡ ಎ.ಭಾಗೀರಥಿ ಮಾತನಾಡಿ, ಮಕ್ಕಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಪುಸ್ತಕಗಳನ್ನು ಓದುವುದ ರಿಂದ ವಿದ್ಯಾರ್ಥಿಗಳ ಜ್ಞಾನ ಹೆಚ್ಚುತ್ತದೆ. ಅಲ್ಲದೆ ಸ್ಪರ್ಧಾತ್ಮಕವಾಗಿ ಬೆಳವಣಿಗೆ ಕಾಣಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಯಪ್ಪ ಕೊಡವ ಕೇರಿಯ ಅಧ್ಯಕ್ಷ ಬೋಡಂಡ ಮುತ್ತಪ್ಪ ಕೊಡವ ಕೇರಿ ಎನ್ನುವುದು ಒಂದು ಕುಟುಂಬ ಇದ್ದಂತೆ. ಕೊಡವ ಕುಟುಂಬಗಳು ತಮ್ಮ ಆಚಾರ, ವಿಚಾರ ಪದ್ಧತಿಯನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ನೀಡಬೇಕು. ಸದಸ್ಯರ ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಸರ್ವರು ಒಗ್ಗಟ್ಟಿನಿಂದ ಸಹಕಾರ ನೀಡುವ ಮೂಲಕ ಸ್ಪಂದಿಸುವAತಾಗಬೇಕು ಎಂದರು.
ಕೊಡವ ವೆಲ್‌ಫೇರ್ ಮತ್ತು ರಿಕ್ರಿಯೇಷನ್ ಅಸೋಸಿಯೇಷನ್ ಅಧ್ಯಕ್ಷ ಕುಕ್ಕೆರ ಜಯ ಚಿಣ್ಣಪ್ಪ ಮಾತನಾಡಿ, ಹಿಂದೆ ಕೊಡಗು ಎಂದರೆ ಕೊಡವರು ಎಂದು ಹೇಳಲಾಗುತ್ತಿತ್ತು. ಆದರೆ ಇಂದು ಕೊಡವರು ತಮ್ಮ ಭೂಮಿಯನ್ನು ಮಾರಾಟ ಮಾಡುತ್ತಿ ದ್ದಾರೆ. ವ್ಯಾಪಾರದ ದೃಷ್ಟಿಯಿಂದ ಇತರ ರಾಜ್ಯದಿಂದ ಕೊಡಗಿಗೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗಿ ಕೊಡವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೊಡವರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಕೊಡವ ವೆಲ್‌ಫೇರ್ ಅಸೋಸಿಯೇಷನ್ ಎಂಬ ಸಂಸ್ಥೆ ಯನ್ನು ಸ್ಥಾಪಿಸಲಾಗಿದೆ. ಇದರ ಮೂಲಕ ವ್ಯಾಪಾರ ನಡೆಸಲು ಪ್ರೋತ್ಸಾಹ ನೀಡುತ್ತಿದ್ದು, ಜನಾಂಗ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಸನ್ಮಾನ : ಸ್ಕಾ÷್ವ.ಲೀ ಅಜ್ಜಮಾಡ ಬಿ.ದೇವಯ್ಯ ಅವರ ಪ್ರತಿಮೆ ಅನಾವರಣಗೊಳಿಸಲು ಕಾರಣಕರ್ತ ರಾದ, ಕೊಡವ ಮಕ್ಕಡ ಕೂಟದ ವತಿಯಿಂದ ೫೪ ಪುಸ್ತಕಗಳನ್ನು ಪ್ರಕಟಿಸಿರುವ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರನ್ನು ಕಾರ್ಯಕ್ರಮ ದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಚೊಟ್ಟಂಡ ದಿವ್ಯ ಪ್ರದೀಪ್ ವಾರ್ಷಿಕ ವರದಿಯನ್ನು ವಾಚಿಸಿ, ಕಾರ್ಯದರ್ಶಿ ಚೋಳಪಂಡ ವಿಜಯ್ ಲೆಕ್ಕಪತ್ರ ಮಂಡಿಸಿದರು. ಸದಸ್ಯರಾದ ಪಳಂಗAಡ ರೇಖಾ ತಮ್ಮಯ್ಯ ಸ್ವಾಗತಿಸಿ, ಚೊಟ್ಟಂಡ ದಿವ್ಯ ಪ್ರದೀಪ್ ನಿರೂಪಿಸಿ, ಚೊಟ್ಟಂಡ ದೇಚಮ್ಮ ಪ್ರದೀಪ್ ವಂದಿಸಿದರು. ನಿರ್ದೇಶಕರಾದ ಪೂಳಂಡ ಮಧು, ಪುದಿಯತಂಡ ಅಪ್ಪಯ್ಯ, ಬಾಳೆಯಡ ಮೀನಾ ಉಪಸ್ಥಿತರಿದ್ದರು. ಮೃತಪಟ್ಟ ಕೇರಿಯ ಸದಸ್ಯರಿಗೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.