ಮಡಿಕೇರಿ, ಏ. ೨೭: ನಗರದ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಬೆಳಿಗ್ಗೆ ಓಂಕಾರೇಶ್ವರ ಹಾಗೂ ಆಂಜನೇಯ ದೇವಾಲಯದಲ್ಲಿ ಗಣಪತಿ ಹೋಮ, ಕಲಶಾಭಿಷೇಕ ನಡೆಯಿತು. ಈ ಸಂದರ್ಭ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಮೇಶ್ ಹೊಳ್ಳ, ದೇವಾಲಯ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.