ಶನಿವಾರಸಂತೆ, ಏ. ೨೭: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಕೂಲಿಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಕೂಲಿ ಕಾರ್ಮಿಕ ಧರ್ಮಪ್ಪ (೪೩) ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.

ಧರ್ಮಪ್ಪ ಮನನೊಂದು ವಿಷ ಸೇವನೆ ಮಾಡಿ ಮೃತಪಟ್ಟಿರುವುದಾಗಿ ಆತನ ಸಹೋದರ ಎಂ.ಎಲ್. ಸೋಮಶೇಖರ್ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.