ಸೋಮವಾರಪೇಟೆ, ಏ. ೨೮: ಕುಶಾಲನಗರದಿಂದ ಸೋಮವಾರಪೇಟೆಗೆ ಬರುವ ೩೩ಕೆ.ವಿ ವಿದ್ಯುತ್ ಮಾರ್ಗದಲ್ಲಿ ಮಳೆಗಾಲದ ಮುಂಜಾಗ್ರತೆಗಾಗಿ ಜಂಗಲ್ ಕಟ್ಟಿಂಗ್ ಮತ್ತು ತುರ್ತು ನಿರ್ವಹಣಾ ಕಾರ್ಯವನ್ನು ಸೆಸ್ಕ್ ಇಲಾಖೆ ವತಿಯಿಂದ ಹಮ್ಮಿಕೊಳ್ಳುವ ಹಿನ್ನೆಲೆ ತಾ. ೩೦ ರಂದು (ನಾಳೆ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಧನಂಜಯ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ೯ ರಿಂದ ಸಂಜೆ ೪ರ ವರೆಗೆ ಸೋಮವಾರಪೇಟೆ ಪಟ್ಟಣ, ಚೌಡ್ಲು ಪಂಚಾಯಿತಿ, ಹಾನಗಲ್ಲು, ದೊಡ್ಡಮಳ್ತೆ, ಐಗೂರು, ನೇರುಗಳಲೆ, ಶಾಂತಳ್ಳಿ, ಕಿರಗಂದೂರು, ಬೆಟ್ಟದಳ್ಳಿ, ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.