ಕೂಡಿಗೆ, ಏ. ೨೮: ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಮಹದೇವನ್ ಕುಶಾಲನಗರ ತಾಲೂಕಿನ ಮೂರು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಭಿವೃದ್ಧಿ ಬಗ್ಗೆ ಪರಿಶೀಲನೆ ನಡೆಸಿದರು.
೭ನೇ ಹೊಸಕೋಟೆ ಗುಡ್ಡೆ ಹೊಸೂರು ಮುಳ್ಳುಸೋಗೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯ ಬಗ್ಗೆ ಮಾಹಿತಿ ಮತ್ತು ಬಯಲು ಗ್ರಂಥಾಲಯದ ವೀಕ್ಷಣೆ, ಡಿಜಿಟಲ್ ಗ್ರಂಥಾಲಯದಲ್ಲಿ ಅಳವಡಿಕೆ ಮಾಡಿರುವ ಕಂಪ್ಯೂಟರ್, ಸಂಗ್ರಹಿಸಿದ ಪುಸ್ತಕಗಳ ಮಾಹಿತಿ, ವಿದ್ಯಾರ್ಥಿಗಳ ಒಳ ಚಟುವಟಿಕೆ ಸ್ಥಳ ಮತ್ತು ಗ್ರಾಮ ಪಂಚಾಯಿತಿ ಉದ್ಯಾನವನ ಸೇರಿದಂತೆ ಗ್ರಾಮ ಪಂಚಾಯಿತಿ ಅಡಳಿತ ಮಂಡಳಿ ನೂತನ ಕಟ್ಟಡಗಳ ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ಕಾರ್ಯವೈಖರಿ, ಮಕ್ಕಳ ನೋಂದಣಿ ಯ ಪ್ರಗತಿ, ಒಳಾಂಗಣ ಕ್ರೀಡಾಂಗಣ ಹಾಗೂ ಶೈಕ್ಷಣಿಕ ಪುಸ್ತಕಗಳ ವಿಭಾಗಗಳನ್ನು ಪರಿಶೀಲಿಸಿ ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಭಂವರ್ ಸಿಂಗ್ ಮೀನಾ, ಉಪ ಕಾರ್ಯದರ್ಶಿ ಲಕ್ಷಿö್ಮ, ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಸಹಾಯಕ ನಿರ್ದೇಶಕ ರವೀಶ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಲುವರಾಜ್, ಸದಸ್ಯರಾದ ಶಿವಾನಂದ, ಹರೀಶ್, ರಮೇಶ್, ಪಾರ್ವತಿ, ಆಶಾ, ಮುಳ್ಳುಸೋಗೆ ಅಭಿವೃದ್ಧಿ ಅಧಿಕಾರಿ ಸುಮೇಶ್, ತಾಲೂಕು ಪಂಚಾಯಿತಿ ಸಹಾಯಕ ಕಾರ್ಯಪಾಲಕ ಅಭಿಯಂತರ ಇಂಜಿನಿಯರ್ ವೀರೇಂದ್ರ, ಇಂಜಿನಿಯರ್ ಕೀರ್ತನ್ ಸೇರಿದಂತೆ ವಿವಿಧ ವಿಭಾಗದ ಅಧಿಕಾರಿ ವರ್ಗದವರು ಹಾಜರಿದ್ದರು.