ಸುಡುತ್ತಿದೆ ಉತ್ತರ ಭಾರತ: ೫ ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ನವದೆಹಲಿ, ಏ. ೨೮: ದೇಶದ ಅನೇಕ ರಾಜ್ಯಗಳಲ್ಲಿ ಉಷ್ಣಾಂಶ ತೀವ್ರವಾಗಿ ಏರಿಕೆಯಾಗುತ್ತಿದ್ದು, ದೇಶದ ಹೆಚ್ಚಿನ ಭಾಗಗಳು ಸುಮಾರು ೪೫ ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ವರದಿ ಮಾಡಿವೆ. ಹೀಗಾಗಿ ಹವಾಮಾನ ಇಲಾಖೆಯು ಉತ್ತರ ಭಾರತದ ಕನಿಷ್ಟ ಐದು ರಾಜ್ಯಗಳಿಗೆ ಉಷ್ಣ ಅಲೆಯ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಭಾರತೀಯ ಹವಾಮಾನ ಇಲಾಖೆ ಕನಿಷ್ಟ ಮುಂದಿನ ಮೂರು ದಿನಗಳಲ್ಲಿ ಉತ್ತರ ಭಾರತದ ಐದು ರಾಜ್ಯಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸುಮಾರು ೨ ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ. ರಾಜಸ್ಥಾನ, ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲಿ ಉಷ್ಣ ಅಲೆಯ ಎಚ್ಚರಿಕೆಯನ್ನು ಘೋಷಿಸಲಾಗಿದೆ. ಈ ರಾಜ್ಯಗಳ ಕೆಲವು ಭಾಗಗಳು ೪೫ ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸುತ್ತವೆ. ತೀವ್ರ ಪರಿಸ್ಥಿತಿಯು ಮೇ ಮೊದಲ ವಾರದವರೆಗೆ ಮುಂದುವರಿಯುವ ಸಾಧ್ಯತೆಯಿದೆ, ನಂತರ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಐಎಂಡಿ ವಿಜ್ಞಾನಿ ಆರ್‌ಕೆ ಜೆನಮಣಿ ಅವರು ತಿಳಿಸಿದ್ದಾರೆ. ರಾಷ್ಟç ರಾಜಧಾನಿಯಲ್ಲಿ ತಾಪಮಾನವು ೪೪ ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ ಎಂದು ಹವಾಮಾನ ಇಲಾಖೆ ಕಚೇರಿ ಮುನ್ಸೂಚನೆ ನೀಡಿದೆ. ಮಹಾರಾಷ್ಟçದಂತಹ ರಾಜ್ಯಗಳಲ್ಲಿ ವಿದ್ಯುತ್ ಬೇಡಿಕೆಯಲ್ಲಿ ತೀವ್ರ ಏರಿಕೆಗೆ ಕಾರಣವಾಗಿದೆ. ರಾಜಸ್ಥಾನವು ಕಾರ್ಖಾನೆಗಳಿಗೆ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ. ತೀವ್ರ ಉಷ್ಣಾಂಶದ ಕಾರಣ ಪಶ್ಚಿಮ ಬಂಗಾಳವು ಶಿಕ್ಷಣ ಸಂಸ್ಥೆಗಳಿಗೆ ಬೇಸಿಗೆಯ ಆರಂಭದಲ್ಲಿ ರಜೆಯನ್ನು ಘೋಷಿಸಿದೆ. ವರದಿಗಳ ಪ್ರಕಾರ ರಾಜ್ಯದ ಶಾಲಾ-ಕಾಲೇಜುಗಳನ್ನು ಮೇ ೨ ರೊಳಗೆ ಬಂದ್ ಮಾಡುವಂತೆ ಆದೇಶಿಸಲಾಗಿದೆ.

ಮಧ್ಯಪ್ರದೇಶ ಸಿಎಲ್‌ಪಿ ನಾಯಕನ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

ಭೋಪಾಲ್, ಏ. ೨೮: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ (ಸಿಎಲ್‌ಪಿ)ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನವೆಂಬರ್ ೨೦೨೩ ರಲ್ಲಿ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಮಲ್ ನಾಥ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ನಿಷ್ಠಾವಂತ ಹಾಗೂ ಮಾಜಿ ಸಚಿವ ಡಾ.ಗೋವಿಂದ್ ಸಿಂಗ್ ಅವರನ್ನು ನೇಮಕ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಒಬ್ಬ ವ್ಯಕ್ತಿ, ಒಂದು ಹುದ್ದೆ ಎಂಬ ನಿಯಮದ ಅಡಿಯಲ್ಲಿ ಕಮಲ್ ನಾಥ್ ಅವರು ಸಿಎಲ್‌ಪಿ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದು, ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ಕಮಲ್ ನಾಥ್ ಅವರು ೨೦೧೮ ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ ೧೫ ತಿಂಗಳುಗಳ ಕಾಲ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ೨೦೨೦ ರಲ್ಲಿ ಹಾಲಿ ಶಾಸಕರ ರಾಜೀನಾಮೆಯಿಂದ ಸರ್ಕಾರ ಪತನಗೊಂಡ ನಂತರವೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆದಿದ್ದರು. ಈಗ ಆ ಹುದ್ದೆಗೂ ರಾಜೀನಾಮೆ ನೀಡಿದ್ದಾರೆ.

ಜನರನ್ನು ಕೇಳದೆ ತೀರ್ಮಾನ ಮಾಡಲ್ಲ: ಸುಮಲತಾ

ಮಂಡ್ಯ, ಏ. ೨೮: ಎರಡು ಮೂರು ದಿನದಲ್ಲಿ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಪ್ರತಿಕ್ರಿಯಿಸಿ ಸದ್ಯಕ್ಕೆ ನಾನು ಯಾವ ಪಕ್ಷದ ಬಗ್ಗೆಯೂ ಆಲೋಚಿಸಿಲ್ಲ. ಯಾವುದಾದ್ರೂ ಪಕ್ಷಕ್ಕೆ ಸೇರಬೇಕು ಅನ್ನೋ ಉದ್ದೇಶವಿದೆ. ಮಂಡ್ಯದ ಜನ, ಮಂಡ್ಯದ ಅಭಿವೃದ್ಧಿ ಕಾಳಜಿ ಇರೋ ಪಕ್ಷ ಸೇರುತ್ತೇನೆ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಾತನಾಡಿದ್ದು, ಮಂಡ್ಯದ ಅಭಿವೃದ್ಧಿ ಕಾಳಜಿ ಇರೋ ಪಕ್ಷ ಸೇರುತ್ತೇನೆ. ಮಂಡ್ಯದ ಜನರನ್ನೂ ಕೇಳದೇ ನಾನು ಏನೂ ತೀರ್ಮಾನ ಮಾಡಲ್ಲ. ಕೇಂದ್ರ ಗೃಹಸಚಿವ ಅಮಿತ್ ಶಾ ಬರೋ ದಿನ ನಾನು ಮಂಡ್ಯದಲ್ಲೇ ಇರಲ್ಲ ಎಂದು ಹೇಳಿದ್ದಾರೆ. ಎರಡು ವರ್ಷಗಳಿಂದ ಸಂಸದರ ನಿಧಿ ಬಂದಿರಲಿಲ್ಲ. ಈಗ ಸಂಸದರ ನಿಧಿ ಬಿಡುಗಡೆಯಾಗಿದೆ. ಈ ಕಾರಣದಿಂದ ಮುಖಂಡರಿಗೆ ಸಂಸದರ ನಿಧಿ ಬಗ್ಗೆ ತಿಳಿಸುತ್ತಿದ್ದೇನೆ. ಮುಖಂಡರು ಹಿಂದೆ ಫಂಡ್ ಬಗ್ಗೆ ಕೇಳಿದ್ದರು. ಈ ಬಗ್ಗೆ ಪ್ರಸ್ತಾಪ ಮಾಡಲು ಅವರನ್ನು ಸಭೆ ಕರೆದಿದ್ದೇನೆ. ಹಾಗಂತ ಈ ಸಭೆ ಬಿಜೆಪಿ ಸೇರುವ ಬಗ್ಗೆ ಅಲ್ಲ. ನಾನು ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ. ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ದರೆ, ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ. ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದಿದ್ದಾರೆ. ಆದರೆ ನನಗೆ ಈಗ ಸದ್ಯಕ್ಕೆ ಅದರ ಅವಶ್ಯಕತೆ ಇಲ್ಲ. ಈಗ ಚುನಾವಣೆಯೂ ಇಲ್ಲ, ಈಗ ಈ ಪ್ರಸ್ತಾಪವೇ ಬೇಡ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಇದನ್ನು ಬಹಿರಂಗವಾಗಿ ಹೇಳಲು ಆಗಲ್ಲ. ಜನರು ಏನು ಅಭಿಪ್ರಾಯ ಹೇಳಿದ್ದಾರೆ ಅದನ್ನು ಹೇಳಲ್ಲ. ನನ್ನ ಬೆಂಬಲಿಗರು ಬಿಜೆಪಿ ಸೇರ್ಪಡೆ ಬಗ್ಗೆ ಏನು ಹೇಳಿದ್ದಾರೆ ಎಂಬುದನ್ನು ನಾನು ಹೇಳಲ್ಲ. ಎಲ್ಲರೂ ಸ್ವತಂತ್ರರು, ಯಾವ ಪಕ್ಷಕ್ಕಾದ್ರು ಸೇರಬಹುದು. ನನ್ನ ಚುನಾವಣೆ ವೇಳೆ ಎಲ್ಲಾ ಪಕ್ಷದವರು ದುಡಿದಿದ್ದಾರೆ ಎಂದು ಹೇಳಿದರು. ಅಭಿಷೇಕ್ ಚುನಾವಣೆ ಸ್ಪರ್ಧೆ ಆತನಿಗೆ ಬಿಟ್ಟಿದ್ದು. ಸಿನಿಮಾಗೆ ಬಾ ಎಂದು ನಾವು ಹೇಳಿಲ್ಲ, ರಾಜಕೀಯ ಬಗ್ಗೆನೂ ನಾವು ಹೇಳಲ್ಲ. ಇದು ಆತನ ವೈಯಕ್ತಿಕ ವಿಚಾರ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ-ಜರ್ದಾರಿ ಪ್ರಮಾಣ ವಚನ ಸ್ವೀಕಾರ

ಇಸ್ಲಾಮಾಬಾದ್, ಏ. ೨೮: ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ ಜರ್ದಾರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಹೊಸ ಸರ್ಕಾರದಲ್ಲಿ ಅವರ ಪಾತ್ರದ ಬಗೆಗಿನ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ. ಪಾಕಿಸ್ತಾನದ ರಾಷ್ಟಾçಧ್ಯಕ್ಷರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ೩೩ ವರ್ಷದ ಬಿಲಾವಲ್ ಭುಟ್ಟೋ ಜರ್ದಾರಿ ಅವರಿಗೆ ಪಾಕ್ ಅಧ್ಯಕ್ಷ ಆರಿಫ್ ಅಲ್ವಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭ ಪ್ರಧಾನಿ ಶೆಹಬಾಜ್ ಷರೀಫ್, ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ, ಪಿಪಿಪಿ ಪಕ್ಷದ ಮುಖಂಡರು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಮೊದಲ ಬಾರಿಗೆ ಬಿಲಾವಲ್ ಅವರಿಗೆ ಸರ್ಕಾರದಲ್ಲಿ ಪ್ರಮುಖ ಹುದ್ದೆ ನೀಡಲಾಗಿದೆ. ದೇಶದ ವಿದೇಶಾಂಗ ಸಚಿವ ಖಾತೆಯನ್ನು ನೀಡಲಾಗಿದೆ. ಬಿಲಾವಲ್ ೨೦೧೮ರಲ್ಲಿ ಮೊದಲ ಬಾರಿಗೆ ರಾಷ್ಟಿçÃಯ ಅಸೆಂಬ್ಲಿಗೆ ಆಯ್ಕೆಯಾಗಿದ್ದರು. ಪಾಕಿಸ್ತಾನ ವಿದೇಶಾಂಗ ನೀತಿ ದುರ್ಬಲಗೊಂಡು ಸಮರ್ಥರ ಅಗತ್ಯವಿದ್ದಾಗ ಬಿಲಾವಲ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮುಖ್ಯಸ್ಥರಾಗಿದ್ದಾರೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂಚಿನ ಆರೋಪ ಮಾಡಿದ್ದ ಅಮೆರಿಕದೊಂದಿಗೆ ಬಿಗಿಯಾದ ಸಂಬAಧ ಹಾಗೂ ನೆರೆಯ ರಾಷ್ಟç ಭಾರತದೊಂದಿಗೆ ಶಾಂತಿ ಪ್ರಕ್ರಿಯೆ ಪುನರ್ ಆರಂಭಕ್ಕೆ ಪರ್ಯಾಯ ಮಾರ್ಗ ಹುಡುಕಾಟ ಮತ್ತಿತರ ಪ್ರಮುಖ ಸವಾಲುಗಳು ನೂತನ ವಿದೇಶಾಂಗ ಸಚಿವರ ಮೇಲಿದೆ.