ಭಾರತೀಯ ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು
ನವದೆಹಲಿ, ಏ. ೨೯: ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಅವರು ಭಾರತೀಯ ಸೇನೆಯ ನೂತನ ಉಪ ಮುಖ್ಯಸ್ಥರಾಗಿ ನೇಮಕಗೊಂಡಿದ್ದು, ಮೇ ೧ ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಸೇನಾ ಉಪ ಮುಖ್ಯಸ್ಥರಾಗಿದ್ದ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ನೂತನ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ರಾಜು ಅವರನ್ನು ನೇಮಕ ಮಾಡಲಾಗಿದೆ. ಲೆಫ್ಟಿನೆಂಟ್ ಜನರಲ್ ರಾಜು ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಪ್ರಸ್ತುತ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪೂರ್ವ ಲಡಾಖ್‌ನಲ್ಲಿ ಸೇನೆಯ ಒಟ್ಟಾರೆ ಕಾರ್ಯಾಚರಣೆಯ ಸಿದ್ಧತೆಯನ್ನು ನೋಡಿಕೊಳ್ಳುತ್ತಾರೆ. ರಾಜು ಸೈನಿಕ್ ಸ್ಕೂಲ್ ಬಿಜಾಪುರ ಮತ್ತು ರಾಷ್ಟಿçÃಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿ, ಅವರನ್ನು ಡಿಸೆಂಬರ್ ೧೫, ೧೯೮೪ ರಂದು ಜಾಟ್ ರೆಜಿಮೆಂಟ್‌ಗೆ ಸೇರ್ಪಡೆಯಾಗಿದ್ದರು.
ರಾಜ್ಯದಲ್ಲಿ ೯ ನೂತನ ವೈದ್ಯಕೀಯ ಕಾಲೇಜು ಸ್ಥಾಪನೆ
ಬೆಂಗಳೂರು, ಏ. ೨೯: ರಾಜ್ಯದಲ್ಲಿ ೯ ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರು ವೈದ್ಯಕೀಯ ಕಾಲೇಜಿನ ಘಟಿಕೋತ್ಸವ ದಲ್ಲಿ ಅದ್ವಿತೀಯ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ೬೫ ವೈದ್ಯಕೀಯ ಕಾಲೇಜುಗಳಿದ್ದು, ಮುಂದಿನ ದಿನಗಳಲ್ಲಿ ೯ ಜಿಲ್ಲೆಗಳಲ್ಲಿ ಹೊಸದಾಗಿ ೯ ಮೆಡಿಕಲ್ ಕಾಲೇಜುಗಳು ಆರಂಭ ಮಾಡಲು ತಯಾರಿ ನಡೆಯುತ್ತಿದೆ ಎಂದರು. ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇ. ೩೦.೫ ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟç, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತಿ ಹೆಚ್ಚಿನ ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ಪ್ರತಿ ವರ್ಷ ೬೫ ಸಾವಿರ ಎಂಬಿಬಿಎಸ್ ವೈದ್ಯರು ಮತ್ತು ೩೦,೦೦೦ ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಹೇಳಿದರು.
ಕೇಂದ್ರದ ಅನುಮತಿ ಪಡೆದು ಹೆಚ್ಚುವರಿ ೨ ಲಕ್ಷ ಟನ್ ರಾಗಿ ಖರೀದಿ
ದಾವಣಗೆರೆ, ಏ. ೨೯: ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ ೨ ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ೨ ಲಕ್ಷ ಟನ್ ಹಾಗೂ ೧,೧೪,೦೦೦ ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದರು. ಕನ್ನಡವೇ ಸಾರ್ವಭೌಮ ಹಿಂದಿ ಭಾಷೆಯ ಬಗ್ಗೆ ಪಕ್ಷದ ನಿಲುವೇನು ಎಂಬುದಕ್ಕೆ ಪ್ರತಿಕ್ರಿಯಿಸಿ, ಸ್ಪಷ್ಟವಾಗಿ ತಿಳಿಸಲಾಗಿದೆ. ಭಾಷಾವಾರು ಪ್ರಾಂತ್ಯಗಳಾದ ಮೇಲೆ ಪ್ರಾದೇಶಿಕತೆಗೆ ಮಹತ್ವ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಬೇರಾವುದೇ ಭಾಷೆ ಅಲ್ಲ ಎಂದರು. ಪ್ರಾದ್ಯಾಪಕರ ನೇಮಕಾತಿ, ಪಿಎಸ್‌ಐ ಪರೀಕ್ಷೆ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಪಿಎಸ್‌ಐ ಪರೀಕ್ಷೆ ಅಕ್ರಮದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ, ಈಗ ಸಿಐಡಿಗೆ ವಹಿಸಲಾಗಿದೆ. ಹಗರಣದ ಮೂಲಕ್ಕೆ ತಲುಪಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಪರೀಕ್ಷಾ ಹಗರಣಗಳು ಸರ್ಕಾರದ ವರ್ಚಿಸ್ಸಿಗೆ ಧಕ್ಕೆಯಾಗುವುದಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ಇಲ್ಲಿ ಸರ್ಕಾರದ ಪ್ರಶ್ನೆ ಬರುವುದಿಲ್ಲ. ಯುಪಿಎಸ್ ಪರೀಕ್ಷಾ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸರ್ಕಾರವೇ ಕಂಡುಹಿಡಿದು ತನಿಖೆ ನಡೆಸುತ್ತಿದೆ. ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯಬೇಕು ಎಂದರು.
ಮೇ ಡೇ: ರ‍್ಯಾಲಿಗೆ ಅನುಮತಿ ನೀಡಲು ಹೈಕೋರ್ಟ್ ನಿರಾಕರಣೆ
ಬೆಂಗಳೂರು, ಏ. ೨೯: ಸಂಚಾರ ದಟ್ಟಣೆಯಿಂದ ಜನರಿಗಾಗುವ ಕಿರಿಕಿರಿ ತಪ್ಪಿಸುವ ನಿಟ್ಟಿನಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದಿರುವ ಹೈಕೋರ್ಟ್, ಮೇ ದಿನದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ‍್ಯ ಉದ್ಯಾನವನ ಮತ್ತು ಟೌನ್‌ಹಾಲ್‌ನಿಂದ ಸ್ವಾತಂತ್ರ‍್ಯ ಉದ್ಯಾನದವರೆಗೂ ಟ್ರೇಡ್ ಯೂನಿಯನ್‌ಗಳು ನಡೆಸಲು ಉದ್ದೇಶಿಸಿದ್ದ ಮೆರವಣಿಗೆಗೆ ಅನುಮತಿಯನ್ನು ಗುರುವಾರ ನಿರಾಕರಿಸಿದೆ. ಮೇ ೧ ರಂದು ರ‍್ಯಾಲಿ ನಡೆಸಲು ಅನುಮತಿ ನೀಡಬೇಕೆಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಮತ್ತಿತರ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆಯಲ್ಲಿ ನ್ಯಾಯಮೂರ್ತಿಗಳಾದ ಆರ್. ದೇವದಾಸ್ ಮತ್ತು ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ಈ ಆದೇಶವನ್ನು ನೀಡಿತು. ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಸ್ವಾತಂತ್ರ ಉದ್ಯಾನವನ ಹೊರತುಪಡಿಸಿ ನಗರದ ಉಳಿದೆಡೆ ಮೆರವಣಿಗೆ, ಪ್ರತಿಭಟನೆಗೆ ಅವಕಾಶ ನೀಡದಂತೆ ಮಾರ್ಚ್ ೩, ೨೦೨೨ ರಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಆದಾಗ್ಯೂ, ಸಂಚಾರ ದಟ್ಟಣೆಗೆ ಕಾರಣವಾಗದಂತೆ ಕರಗ ಮಹೋತ್ಸವ ಆಚರಿಸುವಂತೆ ಹಿಂದಿನ ಆದೇಶವನ್ನು ಹೈಕೋರ್ಟ್ ಮಾರ್ಪಡಿಸಿತ್ತು. ಮಾರ್ಪಡಿಸಿದ ಆದೇಶ ಉಲ್ಲೇಖಿಸಿದ ಅರ್ಜಿದಾರರ ಪರ ವಕೀಲರು, ಯೂನಿಯನ್ ಪರ ಸದಸ್ಯರು ಫ್ರೀಡಂ ಪಾರ್ಕ್ನಲ್ಲಿ ಶಾಂತಿಯುತ ಮೆರಣಿಗೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದರು.
೩ನೇ ಬಾರಿಗೆ ಚೀನಾದ ಅಧ್ಯಕ್ಷರಾಗಿ ಷಿ ಜಿನ್ಪಿಂಗ್
ಬೀಜಿAಗ್, ಏ. ೨೯: ಚೀನಾದ ಕಮ್ಯುನಿಸ್ಟ್ ಪಕ್ಷ(ಸಿಸಿಪಿ)ಯ ೨೦ನೇ ರಾಷ್ಟಿçÃಯ ಕಾಂಗ್ರೆಸ್ ಐತಿಹಾಸಿಕ ಮೂರನೇ ಬಾರಿಗೆ ಷಿ ಜಿನ್ಪಿಂಗ್ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಮರು ಆಯ್ಕೆ ಮಾಡುವ ಸಾಧ್ಯತೆ ಇದೆ. ೨೦೧೨ ರಿಂದಲೂ ಅಧ್ಯಕ್ಷ ಷಿ ಜಿನ್ಪಿಂಗ್ ಅವರು ಸಿಸಿಪಿಯ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಏ. ೨೨ ರಂದು ನಡೆದ ೨೦ನೇ ರಾಷ್ಟಿçÃಯ ಕಾಂಗ್ರೆಸ್‌ನ ಪ್ರಾದೇಶಿಕ ಸಭೆಗೆ ಜಿನ್ಪಿಂಗ್ ಅವರನ್ನು ಸರ್ವಾನುಮತದಿಂದ ಡೆಲಿಗೇಟ್‌ನ್ನಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೂ ಮುನ್ನ ಹುಜಿಂಟಾವೋ ಅವರನ್ನು ೧೮ನೇ ರಾಷ್ಟಿçÃಯ ಕಾಂಗ್ರೆಸ್‌ಗೆ ೨೦೧೨ ರಲ್ಲಿ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಆ ಬಳಿಕ ಷಿಗೆ ಅಧಿಕಾರ ಹಸ್ತಾಂತರ ನಡೆದಿತ್ತು.
ಪುಣೆಯಲ್ಲಿ ಆಶ್ರಯ ಪಡೆದಿದ್ದ ದಿವ್ಯಾ ಹಾಗರಗಿ ಬಂಧನ
ಕಲಬುರಗಿ, ಏ. ೨೯: ಪಿಎಸ್‌ಐ ನೇಮಕಾತಿ ಅಕ್ರಮದ ಮೂಲ ಕಿಂಗ್‌ಪಿನ್ ಆಗಿರುವ ದಿವ್ಯಾ ಹಾಗರಗಿ ಕಳೆದ ಹದಿನೈದು ದಿನಗಳಿಂದ ಮಹಾರಾಷ್ಟçದ ಪುಣೆಯ ಉದ್ಯಮಿ ಸುರೇಶ್ ಕಾಟೇಗಾಂವ್ ಬಳಿ ಆಶ್ರಯದಲ್ಲಿದ್ದಳು. ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಮಹಾರಾಷ್ಟçಕ್ಕೆ ತೆರಳಿದ ದಿವ್ಯಾ, ಸುರೇಶ್ ಕಾಟೇಗಾಂವ್ ಬಳಿ ಆಶ್ರಯ ಪಡೆದುಕೊಂಡಿದ್ದಾಳೆ. ಆಶ್ರಯಕೊಟ್ಟ ಸುರೇಶ್ ಕಾಟೇಗಾಂವ್ ಮರುಳು ದಂಧೆ ಮಾಡುತ್ತಿದ್ದ, ಆತನನ್ನು ಆಶ್ರಯ ನೀಡಿದ ಕಾರಣಕ್ಕೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ಪ್ರಕರಣದಲ್ಲಿ ದಿವ್ಯಾ ಹಾಗರಗಿ, ಅರ್ಚನಾ, ಸುನಂದಾ ಅವರನ್ನೂ ಬಂಧಿಸಲಾಗಿದೆ. ಶಾಂತಿಬಾಯಿ, ಸುರೇಶ್ ಕಾಟೇಗಾಂವ್ ಸೇರಿದಂತೆ ಮತ್ತೊಬ್ಬರನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಸ್ಥೆ, ಅಕ್ರಮಕ್ಕೆ ಸಂಬAಧಿಸಿದAತೆ ಸಿಐಡಿ ಪೊಲೀಸರು ಶಹಾಬಾದ್ ನಗರಸಭೆಯ ದ್ವಿತೀಯ ದರ್ಜೆ ಸಹಾಯಕಿ ಜ್ಯೋತಿ ಪಾಟೀಲ್ ಎಂಬವರನ್ನು ನಿನ್ನೆ ವಶಕ್ಕೆ ಪಡೆದಿದ್ದರು. ಪಿಎಸ್‌ಐ ಪರೀಕ್ಷೆ ಬರೆದಿದ್ದ ಸೇಡಂನ ಶಾತಿಬಾಯಿ ಬಸ್ಯನಾಯ್ಕ ಎಂಬುವವರಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳುವಲ್ಲಿ ಸಹಕರಿಸಿದ ಆರೋಪವಿದೆ. ಜ್ಯೋತಿ ಪಾಟೀಲ್ ಅವರ ಮೊಬೈಲ್‌ಗೆ ಬಂದ ಹಾಗೂ ಅವರ ಮೊಬೈಲ್‌ನಿಂದ ಹೊರಹೋದ ಕರೆಗಳನ್ನು ಸಿಐಡಿ ತಂಡ ಜಾಲಾಡಿದಾಗ ಆರೋಪಿಗಳಲ್ಲಿ ಒಬ್ಬರು ಜ್ಯೋತಿ ಪಾಟೀಲ್ ಅವರ ಜೊತೆ ಸಂಪರ್ಕದಲ್ಲಿ ಇರುವುದು ಗೊತ್ತಾಯಿತು. ಆ ಮೊಬೈಲ್ ಲೊಕೇಷನ್ ಪತ್ತೆ ಹಚ್ಚಿದ ತನಿಖಾಧಿಕಾರಿಗಳು ಮಹಾರಾಷ್ಟçದ ಪೊಲೀಸರ ನೆರವಿನೊಂದಿಗೆ ಆರೋಪಿಗಳನ್ನು ಕಳೆದ ಮಧ್ಯರಾತ್ರಿ ಪುಣೆಯಲ್ಲಿ ದಿವ್ಯಾ ಹಾಗರಗಿ ಹಾಗೂ ಇತರರನ್ನು ಬಂಧಿಸಿದ್ದಾರೆ. ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ೧೧ ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡಲಾಗಿದೆ. ಮಹಾರಾಷ್ಟçದ ಪುಣೆಯಲ್ಲಿ ಪೊಲೀಸರು ದಿವ್ಯಾ ಹಾಗರಗಿ ಬಂಧಿಸಿದ್ದರು. ಶುಕ್ರವಾರ ಕಲಬುರಗಿಯ ೩ನೇ ಜೆಎಂಎಫ್‌ಸಿ ಕೋರ್ಟ್ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ ಇತರ ೬ ಆರೋಪಿಗಳನ್ನು ಸಿಐಡಿ ವಶಕ್ಕೆ ನೀಡಿದೆ. ಹಗರಣದ ಆರೋಪಿಗಳಾದ ಸುನಂದಾ, ಶಾಂತಿಬಾಯಿ ಇನ್ನೂ ತಲೆಮರೆಸಿಕೊಂಡಿದ್ದಾರೆ.