ಕರಿಕೆ, ಏ. ೨೯: ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಅವರು ಕೊಡಗು ಹಾಗೂ ಕೇರಳ ಗಡಿ ಭಾಗದ ಕರಿಕೆ ಚೆಕ್‌ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಂಬೇರಿ ಬಳಿಯ ತಪಾಸಣೆ ಗೇಟಿಗೆ ತೆರಳಿ ಅಲ್ಲಿನ ಭದ್ರತೆ ಹಾಗೂ ಸಿಸಿ ಕ್ಯಾಮರಾಗಳ ಕಾರ್ಯ ಕ್ಷಮತೆಯನ್ನು ಪರಿಶೀಲಿಸಿ ಸಿಬ್ಬಂದಿಗಳ ಕುಂದುಕೊರತೆಗಳನ್ನು ವಿಚಾರಿಸಿ ಅಕ್ರಮ ವನ್ಯಜೀವಿ ಬೇಟೆ, ಮರ ಸಾಗಾಟದ ಬಗ್ಗೆ ನಿಗಾವಹಿಸುವಂತೆ ಸೂಚಿಸಿದರು.