ಮಡಿಕೇರಿ, ಏ. ೨೯: ಮಡಿಕೇರಿ ತಾಲೂಕು ಕಚೇರಿಗೆ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಇಂದು ಭೇಟಿ ನೀಡಿ, ಸಾರ್ವಜನಿಕರ ಅಹವಾಲುಗಳ ಕುರಿತು ತಹಶೀಲ್ದಾರ್ ಮಹೇಶ್ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸರಕಾರಿ ಸಿಬ್ಬಂದಿಗಳು ಸಾರ್ವಜನಿಕರ ಕೆಲಸ - ಕಾರ್ಯಗಳ ಬಗ್ಗೆ ಸ್ಪಂದಿಸಿ ಕೆಲಸ ನಿರ್ವಹಿಸುವಂತೆ ಸೂಚಿಸಿದ ಅವರು, ಕಡತಗಳ ತ್ವರಿತ ವಿಲೇವಾರಿಗೆ ಕ್ರಮಕೈಗೊಳ್ಳಲು ತಿಳಿಸಿದರು. ಈ ಸಂದರ್ಭ ಸಾರ್ವಜನಿಕರು ವಿವಿಧ ಸಮಸ್ಯೆಗಳ ಬಗ್ಗೆ ವೀಣಾ ಅವರ ಗಮನಕ್ಕೆ ತಂದರು.

ಸಿAಗಲ್ ಆರ್‌ಟಿಸಿ ಮತ್ತಿತರ ವಿಚಾರಗಳ ಬಗ್ಗೆ ಸದಸ್ಯರು ತಹಶೀಲ್ದಾರ್ ಮಹೇಶ್ ಅವರೊಂದಿಗೆ ಚರ್ಚಿಸಿದರು.