ಕೊಡಗು ಸೇರಿದಂತೆ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯಲ್ಲಿ ಕಾಫಿ ಬೆಳೆಯುವ ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ಎಂ. ಮಂಗಳ ಗೌರಿ ಹೊರಡಿಸಿರುವ ಸುತ್ತೋಲೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಖಂಡಿಸಿದೆ.ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿಗಳು ರೈತ ಸಂಘಕ್ಕೆ ಬರೆದ ಪತ್ರದಲ್ಲಿ ಈ ವಿಷಯವನ್ನು ಸ್ಪಷ್ಟ ಪಡಿಸಿದ್ದು, ಕೊಡಗಿನ ಕಾಫಿ ಬೆಳೆಗಾರರಿಗೆ ಮತ್ತೆ ಸರ್ಕಾರ ಅನ್ಯಾಯ ಮಾಡಿದೆ, ಈ ಬಗ್ಗೆ ಮತ್ತೆ ರಾಜ್ಯದ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಅತಿಸಣ್ಣ ರೈತರಿಗೆ ೧೦ ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ನೀಡಲು ಒತ್ತಾಯಿಸ ಲಾಗುತ್ತದೆ ಎಂದರು.

ರೈತ ಸಂಘದ ಕಾನೂನು ಘಟಕದ ಸಲಹೆಗಾರ ವಕೀಲ ಹೇಮ ಚಂದ್ರ ಮಾತನಾಡಿ, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇಂಧನ ಇಲಾಖೆಯ ಕಾರ್ಯದರ್ಶಿ ಹೊರಡಿಸಿರುವ ಆದೇಶದ ಪ್ರತಿಯನ್ನು ಸುಡುವುದರ ಮೂಲಕ ತಮ್ಮ ಹೋರಾಟ ಮುಂದುವರಿಯಲಿದೆ. ಇಂತಹ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಸಭೆಯಲ್ಲಿ ಪ್ರಧಾನ ಕಾರ್ಯ ದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್, ಜಿಲ್ಲಾ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ವೀರಾಜಪೇಟೆ ತಾಲೂಕು ಅಧ್ಯಕ್ಷ ಬಾಚಮಾಡ ಭವಿ ಕುಮಾರ್ ವಿವಿಧ ಹೋಬಳಿ ಅಧ್ಯಕ್ಷರಾದ ಮಂಡೆಪAಡ ಪ್ರವೀಣ್, ಚಟ್ಟಂಗಡ ಕಂಬ ಕಾರ್ಯಪ್ಪ, ಆಲೆಮಾಡ ಮಂಜುನಾಥ್, ಚಂಗುಲAಡ ಸೂರಜ್, ಕಿಶ ಮಾಚಯ್ಯ, ಪುಚ್ಚಿಮಾಡ ರಾಯ್ ಮಾದಪ್ಪ ಸೇರಿದಂತೆ ವಿವಿಧ ಹೋಬಳಿಯ ಪದಾಧಿಕಾರಿಗಳಾದ ತೀತರಮಾಡ ರಾಜ, ಚೆಟ್ಟಿಮಾಡ ರಾಬೀನ್, ಶ್ರೀಕಂಠ ಭಾಗವಹಿಸಿದ್ದರು.