ಗೋಣಿಕೊಪ್ಪಲು, ಏ. ೨೯: ಕೊಡಗಿನ ಸಣ್ಣ ಹಾಗೂ ಅತಿಸಣ್ಣ ರೈತರ ಬೇಡಿಕೆಯನ್ನು ಈಡೇರಿಸುವಲ್ಲಿ ಕರ್ನಾಟಕ ಸರ್ಕಾರ ಮತ್ತೆ ವಿಫಲವಾಗಿದೆ.ಕೊಡಗಿನ ಜನಪ್ರತಿನಿಧಿಗಳ, ಸಂಘ ಸಂಸ್ಥೆಗಳ ಮನವಿಗೆ ಸ್ಪಂದಿಸುವ ಭರವಸೆಯನ್ನು ನೀಡಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾತಿಗೆ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದು ಇದೀಗ ಬೆಳಕಿಗೆ ಬಂದಿವೆ.
ರಾಜ್ಯದ ಉಳಿದ ಜಿಲ್ಲೆಗಳ ರೈತರಿಗೆ ಸಿಗುತ್ತಿರುವ ರೀತಿಯಲ್ಲಿ ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಾಫಿ ಅವಂಭಿತ ರೈತರಿಗೆ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ೧೦ ಹೆಚ್.ಪಿ. ಉಚಿತ ವಿದ್ಯುತ್ ನೀಡುವಂತೆ ಜಿಲ್ಲೆಯ ರೈತರು ಪ್ರತಿಭಟನೆ ನಡೆಸಿ, ಸರ್ಕಾರವನ್ನು ಒತ್ತಾಯಿಸಿದ್ದರು.ಕಳೆದ ವಿಧಾನಸಭಾ ಅಧಿವೇಶನ ಆರಂಭವಾದ ಸಂದರ್ಭ ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಕಾಡ್ಯಮಾಡ ಮನುಸೋಮಯ್ಯ ಮುಂದಾಳತ್ವದಲ್ಲಿ ಸೋಮವಾರಪೇಟೆಯ ಜೇಸಿ ವೇದಿಕೆಯಲ್ಲಿ ಸತತ ೨೬ ದಿನಗಳ ಕಾಲ ಧರಣಿ ನಡೆಸಿ ಸರ್ಕಾರದ ಮೇಲೆ ಒತ್ತಡ ತರಲಾಗಿತ್ತು.
ಅಧಿವೇಶನ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ಮನುಸೋಮಯ್ಯ ಮುಂದಾಳತ್ವದಲ್ಲಿ ಖುದ್ದಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಉಚಿತ ವಿದ್ಯುತ್ ನೀಡುವ ಕುರಿತು ಮನವರಿಕೆ ಮಾಡಿಕೊಟ್ಟಿದ್ದರು.
ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ೧೦ ಹೆಚ್.ಪಿ. ಉಚಿತ ವಿದ್ಯುತ್ ನೀಡುವಂತೆ ಜಿಲ್ಲೆಯ ರೈತರು ಪ್ರತಿಭಟನೆ ನಡೆಸಿ, ಸರ್ಕಾರವನ್ನು ಒತ್ತಾಯಿಸಿದ್ದರು.
ಕಳೆದ ವಿಧಾನಸಭಾ ಅಧಿವೇಶನ ಆರಂಭವಾದ ಸಂದರ್ಭ ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಕಾಡ್ಯಮಾಡ ಮನುಸೋಮಯ್ಯ ಮುಂದಾಳತ್ವದಲ್ಲಿ ಸೋಮವಾರಪೇಟೆಯ ಜೇಸಿ ವೇದಿಕೆಯಲ್ಲಿ ಸತತ ೨೬ ದಿನಗಳ ಕಾಲ ಧರಣಿ ನಡೆಸಿ ಸರ್ಕಾರದ ಮೇಲೆ ಒತ್ತಡ ತರಲಾಗಿತ್ತು.
ಅಧಿವೇಶನ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ಮನುಸೋಮಯ್ಯ ಮುಂದಾಳತ್ವದಲ್ಲಿ ಖುದ್ದಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಉಚಿತ ವಿದ್ಯುತ್ ನೀಡುವ ಕುರಿತು ಮನವರಿಕೆ ಮಾಡಿಕೊಟ್ಟಿದ್ದರು.
(ಮೊದಲ ಪುಟದಿಂದ) ಕಾರಣ ಈ ನಷ್ಟವನ್ನು ಸರಿದೂಗಿಸಲು ಇನ್ನೂ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಉಚಿತ ವಿದ್ಯುತ್ ನೀಡಲು ಅಸಾಧ್ಯ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಇದೀಗ ಇಂಧನ ಇಲಾಖೆಯ ಸುತ್ತೋಲೆಯಿಂದ ಜಿಲ್ಲೆಯ ಕಾಫಿ ಬೆಳೆಗಾರರ ಉಚಿತ ವಿದ್ಯುತ್ ಕನಸು ಭಗ್ನಗೊಂಡಿದೆ.
ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ನೀಡುವ ಆದೇಶಕ್ಕೆ ಬೆಲೆ ನೀಡದ ಇಂತಹ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.